ಬಾಲಿವುಡ್ ನಟಿ ನೋರಾ ಫತೇಹಿ ಅವರನ್ನು 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಆರ್ಥಿಕ ಅಪರಾಧ ವಿಭಾಗ ವಿಚಾರಣೆಗೆ ಒಳಪಡಿಸಿದ್ದಾರೆ. ಸುಕೇಶ್ ಚಂದ್ರಶೇಖರ್ ಅವರ 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಇದೀಗ ಜಾಕ್ವೆಲಿನ್ ನಂತರ ನೋರಾ ಫತೇಹಿ ವಿಚಾರಣೆಗೆ ಕರೆಯಲಾಗಿದೆ. 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ನೋರಾ ಕೂಡ ಭಾಗಿಯಾಗಿರುವ ಬಗ್ಗೆಯೂ ಮತ್ತೆ ವಿಚಾರಣೆ ನಡೆಸುತ್ತಿದೆ.
ಸುಕೇಶ್ ಚಂದ್ರಶೇಖರ್ ಜೈಲು ವಾಸದಲ್ಲಿದ್ದು, ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ (ಸೆ.3) ಶುಕ್ರವಾರ ಆರ್ಥಿಕ ಅಪರಾಧ ವಿಭಾಗ ನೋರಾ ಅವರನ್ನ 4 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.