News Karnataka Kannada
Thursday, May 02 2024
ಬಾಲಿವುಡ್

ಕೆ.ಆರ್.ಜಿ ಸ್ಟುಡಿಯೋದಿಂದ ಆದಿಪುರುಷ ರಿಲೀಸ್

adhipurush cinema poster
Photo Credit : Twitter

ಭಾರತೀಯ ಸಿನಿಮಾ ರಂಗದಲ್ಲಿ ದಾಖಲೆ ಬರೆದ ಕೆ.ಜಿ.ಎಫ್ 1, ಕೆ.ಜಿ.ಎಫ್ 2, ಕಾಂತಾರ, ಚಾರ್ಲಿ 777, ಗಂಧದಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿದ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದೀಗ ಆದಿಪುರುಷ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ.

ಸದಭಿರುಚಿಯ ಚಿತ್ರಗಳನ್ನು ಸಿನಿಮಾ ಪ್ರೇಕ್ಷಕರಿಗೆ ತಲುಪಿಸುವ ಕೈಂಕರ್ಯದಲ್ಲಿ ಕೆ.ಆರ್.ಜಿ.ಸ್ಟುಡಿಯೋಸ್ ಸಂಸ್ಥೆ ತೊಡಗಿದೆ. ಈ ಸಂಸ್ಥೆಯ ಕಿರೀಟಕ್ಕೆ ಮತ್ತೊಂದು ಗರಿ ಆದಿಪುರುಷ ಆಗಲಿದೆ ಅನ್ನುವುದು ಸಂಸ್ಥೆಯ ನಂಬಿಕೆ.

ರಾಮಾಯಣದ ಎಳೆಯನ್ನು ಆಧರಿಸಿ ತಯಾರಿಸಿರುವ ಚಿತ್ರ ಆದಿಪುರುಷ. ಟಿ. ಸೀರೀಸ್ ಮತ್ತು ರೆಟ್ರೋ ಫಿಲ್ಮಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಕಥೆ ಹೆಣೆದು ನಿರ್ದೇಶನ ಮಾಡುತ್ತಿರುವುದು ಓಂ ರಾವತ್ ಅವರು.

ಆದಿಪುರುಷ ಚಿತ್ರವು ಏಕಕಾಲಕ್ಕೆ ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ತಯಾರಾಗಿದೆ. ಚಿತ್ರದ ತಾರಾಗಣದಲ್ಲಿ ಪ್ರಭಾಸ್, ಕೃತಿ ಸನೋನ್, ಸೈಫ್ ಅಲಿ ಖಾನ್, ಸನ್ನಿ ಸಿಂಗ್, ದೇವದತ್ತ ನಾಗೇ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು