News Karnataka Kannada
Sunday, May 05 2024
ಬಾಲಿವುಡ್

ಟೈಗರ್ ಶ್ರಾಫ್, ಸನ್ನಿ ಲಿಯೋನ್ ಸೇರಿ ಹಲವು ಬಾಲಿವುಡ್ ನಟ-ನಟಿಯರಿಗೆ ಇಡಿ ಶಾಕ್

Ed
Photo Credit : News Kannada

ಮುಂಬೈ: ಮಹಾದೇವ್ ಆನ್ ಲೈನ್ ಬೆಟ್ಟಿಂಗ್ ಅಪ್ಲಿಕೇಷನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಟೈಗರ್ ಶ್ರಾಫ್, ಸನ್ನಿ ಲಿಯೋನ್ ಸೇರಿದಂತೆ ಬಾಲಿವುಡ್ ನ ಹಲವು ನಟ, ನಟಿಯರ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ಮಹಾದೇವ್ ಆನ್ ಲೈನ್ ಬುಕ್ ಬೆಟ್ಟಿಂಗ್ ಆ್ಯಪ್‌ ಗೆ ಸಂಬಂಧಿಸಿ ಕೋಲ್ಕತ್ತ, ಭೋಪಾಲ್ ಹಾಗೂ ಮುಂಬೈನ 39 ಸ್ಥಳಗಳಲ್ಲಿ ಇಡಿ ಇಂದು (ಸೆ.15) ದಾಳಿ ನಡೆಸಿದ್ದು, ಸುಮಾರು 417 ಕೋಟಿ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದೆ.

ಈ ಸಂಸ್ಥೆ ಮಾಲೀಕ ಸೌರಭ್ ಚಂದ್ರಕರ್ ವಿವಾಹ ದುಬೈನಲ್ಲಿ ಈ ವರ್ಷದ ಫೆಬ್ರವರಿಯಲ್ಲಿ ಅದ್ದೂರಿಯಾಗಿ ನಡೆದಿತ್ತು. 200 ಕೋಟಿ ರೂ. ವೆಚ್ಚದ ಈ ಐಷಾರಾಮಿ ಮದುವೆಯಲ್ಲಿ ಟೈಗರ್ ಶ್ರಾಫ್, ಸನ್ನಿ ಲಿಯೋನ್, ಕೃತಿ ಕರಬಂಧ, ನುಸ್ರತ್ ಬರೂಚಾ, ಭಾಗ್ಯಶ್ರೀ, ಕಮಿಡಿಯನ್​ಗಳಾದ ಕೃಷ್ಣ ಅಭಿಷೇಕ್, ಭಾರತಿ, ಗಾಯಕರಾದ ನೇಹಾ ಕಕ್ಕಡ್, ಅತಿಫ್ ಅಸ್ಲಂ, ರಾಹತ್ ಫತೇ ಅಲಿ ಖಾನ್, ವಿಶಾಲ್ ದದ್ಲಾನಿ, ಅಲಿ ಅಸ್ಗರ್ ಸೇರಿದಂತೆ ಒಟ್ಟು 14 ಬಾಲಿವುಡ್ ನಟ-ನಟಿಯರು ಹಾಗೂ ಗಾಯಕ-ಗಾಯಕಿಯರು ಪಾಲ್ಗೊಂಡಿದ್ದರು.

ಈ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ಸೆಲೆಬ್ರಿಟಿಗಳು ಹವಾಲಾ ಹಣ ಸ್ವೀಕರಿಸಿದ್ದಾರೆ ಎಂಬುದು ತನಿಖೆ ವೇಳೆ ಪತ್ತೆಯಾಗಿದೆ ಎಂದು ಇಡಿ ತಿಳಿಸಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು