ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮುಂಜಾನೆ 5 ಗಂಟೆ ಹೊತ್ತಿಗೆ, ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಮೋಟರ್ ಸೈಕಲ್ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.
ಘಟನೆಯ ಕುರಿತು ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿಗಳನ್ನು ಪತ್ತೆಹಚ್ಚುತ್ತಿರುವುದಾಗಿ ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಸಲ್ಮಾನ್ ಖಾನ್ ಮನೆಯ ಸುತ್ತಮುತ್ತ ಭದ್ರತೆ ಹೆಚ್ಚಿಸಲಾಗಿದ್ದು, ಸ್ಥಳಕ್ಕೆ ಕ್ರೈಂ ಬ್ರಾಂಚ್ ಮತ್ತು ಸ್ಥಳೀಯ ಪೊಲೀಸ್ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿವೆ ಎಂದು ವರದಿಯಾಗಿದೆ.