News Karnataka Kannada
Wednesday, April 24 2024
Cricket
ಮನರಂಜನೆ

ಬೋನಿ ಕಪೂರ್ ಕಂಪನಿಗೆ ನೋಯ್ಡಾ ಬಳಿ ಫಿಲ್ಮ್ ಸಿಟಿ ನಿರ್ಮಾಣದ ಹೊಣೆ

Kapr
Photo Credit :

ವದೆಹಲಿ: ಉತ್ತರ ಪ್ರದೇಶ ಸರ್ಕಾರದ ಮಹತ್ವಾಕಾಂಕ್ಷೆಯ ‘ಫಿಲ್ಮ್ ಸಿಟಿ’ ಯೋಜನೆ ಅನುಷ್ಠಾನದ ಹೊಣೆ ಖ್ಯಾತ ನಿರ್ಮಾಪಕ ಬೋನಿ ಕಪೂರ್ ಅವರ ಸಂಸ್ಥೆಗೆ ದಕ್ಕಿದೆ.

ರಿಯಲ್ ಎಸ್ಟೇಟ್ ಕಂಪನಿ ಭೂತಾನಿ ಗ್ರೂಪ್ ಸಹಯೋಗದೊಂದಿಗೆ ಬೋನಿ ಕಪೂರ್ ಅವರ Bayview Projects ಕಂಪನಿ ನೋಯ್ಡಾ ಬಳಿಯ ಯಮುನಾ ಎಕ್ಸ್‌ಪ್ರೆಸ್‌ವೇಗೆ ಹೊಂದಿಕೊಂಡಂತೆ ಇರುವ ಸ್ಥಳದಲ್ಲಿ ಜಾಗತಿಕ ಗುಣಮಟ್ಟದ ಫಿಲ್ಮ್ ಸಿಟಿ ನಿರ್ಮಾಣದ ಹೊಣೆ ಹೊತ್ತುಕೊಂಡಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.  ಮೇಲ್ವಿಚಾರಣೆಯಲ್ಲಿ ಫಿಲ್ಮ್ ಸಿಟಿ ಹಂತ ಹಂತವಾಗಿ ನಿರ್ಮಾಣವಾಗಲಿದೆ. ಮಂಗಳವಾರ ಫಿಲ್ಮ್ ಸಿಟಿ ನಿರ್ಮಾಣದ ಒಪ್ಪಂದಕ್ಕೆ ಸಹಿ ಬಿದ್ದಿದೆ.

ಸುಮಾರು 1,000 ಎಕರೆಯಲ್ಲಿ ಈ ಫಿಲ್ಮ್ ಸಿಟಿ ನಿರ್ಮಾಣವಾಗಲಿದ್ದು 230 ಎಕರೆಯಲ್ಲಿನ ಮೊದಲ ಹಂತದ ಯೋಜನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶೀಘ್ರದಲ್ಲೇ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಉತ್ತರ ಪ್ರದೇಶದಲ್ಲಿ ಪ್ರವಾಸೋಧ್ಯಮ, ಮನರಂಜನಾ ಕ್ಷೇತ್ರದ ಬೆಳವಣಿಗೆ ಸಂಬಂಧ ಸಿಎಂ ಯೋಗಿ ಆದಿತ್ಯನಾಥ್ ಅವರ ಕನಸಿನ ಯೋಜನೆ ಇದಾಗಿದೆ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು