ಮನರಂಜನೆ

‘ಕ್ಯಾಪ್ಟನ್​ ಮಿಲ್ಲರ್​’ ಸಿನಿಮಾಗೆ ಸಿಕ್ಕಾಯಿತು ‘ಯು/ಎ’ ಪ್ರಮಾಣಪತ್ರ

ಬೆಂಗಳೂರು: ಧನುಷ್ ನಟನೆಯ ‘ಕ್ಯಾಪ್ಟನ್​ ಮಿಲ್ಲರ್​’ ಸಿನಿಮಾ ಜನವರಿ 12ರಂದು ತೆರೆ ಕಾಣಲಿದ್ದು ,ಈ ಸಿನಿಮಾಗೆ ಸೆನ್ಸಾರ್​ ಪ್ರಕ್ರಿಯೆ ಪೂರ್ಣಗೊಂಡಿವೆ. ಸಿನಿಮಾ ನೋಡಿದ  ಸೆನ್ಸಾರ್​  ಮಂಡಳಿ ಸದಸ್ಯರು ‘ಯು/ಎ’ ಪ್ರಮಾಣಪತ್ರ ನೀಡಿದ್ದಾರೆ.

ಈ ಚಿತ್ರದಲ್ಲಿಶಿವರಾಜ್​ಕುಮಾರ್​  ಕೂಡ ಒಂದು ಪ್ರಮುಖ ಪಾತ್ರ ಮಾಡಿರುವುದರಿಂದ ಚಲನ ಚಿತ್ರದ ನಿರೀಕ್ಷೆ ಜೋರಾಗಿದೆ.  ಶಿವರಾಜ್​ಕುಮಾರ್​ ಅವರಿಗೆ ಪರಭಾಷೆಯಲ್ಲೂ ಡಿಮ್ಯಾಂಡ್​ ಇದೆ. ಕಳೆದ ವರ್ಷ ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾದಲ್ಲಿ ಶಿವಣ್ಣ ಒಂದು ಪಾತ್ರ ಮಾಡಿದ್ದರು.

‘ಕ್ಯಾಪ್ಟನ್​ ಮಿಲ್ಲರ್​’ ಸಿನಿಮಾಗೆ ಅರುಣ್​ ಮಾದೇಶ್ವರನ್​ ನಿರ್ದೇಶನ ಮಾಡಿದ್ದಾರೆ. ಜಿ.ವಿ. ಪ್ರಕಾಶ್​ ಕುಮಾರ್​ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಸೆನ್ಸಾರ್​ ಪ್ರಮಾಣ ಪತ್ರ ಪಡೆದ ಬಳಿಕ ‘ಕ್ಯಾಪ್ಟನ್​ ಮಿಲ್ಲರ್​’ ಸಿನಿಮಾದ ಅವಧಿ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಚಿತ್ರದ ಅವಧಿ 2 ಗಂಟೆ 37 ನಿಮಿಷ ಇದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ತಮಿಳಿನ ಜೊತೆಗೆ ಕನ್ನಡ, ತೆಲುಗು ಮುಂತಾದ ಭಾಷೆಗಳಿಗೆ ಡಬ್​ ಆಗಿ ರಿಲೀಸ್​ ಆಗುತ್ತಿದೆ.

Ashika S

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

8 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

8 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

8 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

9 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

9 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

9 hours ago