ಮಂಗಳೂರು : ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತುಳು ರಂಗಭೂಮಿಯ ಖ್ಯಾತ ನಟ, ಚಲನಚಿತ್ರ ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ‘ನಾನು ಮನೆಯಿಂದ ಹೊರ ಹೋದಾಗ ಮನೆಯಲ್ಲಿ ನನ್ನ ಕುಟುಂಬ ಕಾಯುತ್ತಿರುತ್ತದೆ’ ಎಂಬ ಜಾಗೃತ ಪ್ರಜ್ಞೆ ಪ್ರತಿಯೊಬ್ಬರಲ್ಲಿ ಬಂದಾಗ ನಿರ್ಲಕ್ಷ್ಯದ ಅಪಘಾತಗಳನ್ನು ತಡೆಯಬಹುದು ಎಂದರು.