ಖ್ಯಾತ ನಟ ಪ್ರವೀಣ್ ಕಾರು ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಕೂಡಲೇ ಪ್ರವೀಣ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಗಾಯಗೊಂಡಿದ್ದರಿಂದ ಐಸಿಯುವಿಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.
ಬಾಂದ್ರ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪತ್ನಿ ಸೇರಿದಂತೆ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿದ್ದಾರೆ. ಸದ್ಯಕ್ಕೆ ಆ ಕುರಿತು ಏನೂ ಹೇಳೋಕೆ ಆಗ್ತಿಲ್ಲ. ನಮ್ಮ ಕುಟುಂಬಕ್ಕೆ ತೀವ್ರ ಆಘಾತವಾಗಿದೆ ಎಂದು ಪತ್ನಿ ಹೇಳಿದ್ದಾರೆ. ಸದ್ಯ ತೀವ್ರನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ
Ad