ಬೆಂಗಳೂರು: ʻಒಂದು ಸರಳ ಪ್ರೇಮಕಥೆʼ ಅಭೂತಪೂರ್ವ ಯಶಸ್ಸಿನ ಬಳಿಕ ನಟಿಸಿರುವ ಬಹುನಿರೀಕ್ಷಿತ ಚಿತ್ರ ʻಪೆಪೆʼ. ಟೈಟಲ್ ಹಾಗೂ ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಸಿನಿಮಾ ಈಗ ಸೆನ್ಸಾರ್ ಪಾಸಾಗಿದೆ. ಸೆನ್ಸಾರ್ ಮಂಡಳಿಯಿಂದ ಪೆಪೆಗೆ ʻಎʼ ಸರ್ಟಿಫಿಕೇಟ್ ಸಿಕ್ಕಿದ್ದು, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚುವಂತೆ ಮಾಡಿದೆ.
ತಮ್ಮ ಹಿಂದಿನ ಸಿನಿಮಾ ‘ಒಂದು ಸರಳ ಪ್ರೇಮಕಥೆ’ ಸಿನಿಮಾದಲ್ಲಿ ಲವರ್ ಬಾಯ್ ಆಗಿ, ಸರಳ ಯುವಕನಾಗಿ ಗಮನ ಸೆಳೆದಿದ್ದ ನಟ ವಿನಯ್ ರಾಜ್ಕುಮಾರ್, ಈಗ ‘ಪೆಪೆ’ ಸಿನಿಮಾದಲ್ಲಿ ರಗಡ್ ಆಗಿ ಅಬ್ಬರಿಸಲಿದ್ದಾರೆ. ‘ಪೆಪೆ’ ಸಿನಿಮಾವು ಹಳ್ಳಿಗಾಡಿನ ಯುವಕನೊಬ್ಬನ ಕತೆಯನ್ನು ಒಳಗೊಂಡಿದೆ. ಸಿನಿಮಾದಲ್ಲಿ ವಿನಯ್ ರಾಜ್ಕುಮಾರ್ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾವು ಕ್ರೈಂ ಥ್ರಿಲ್ಲರ್ ಆಗಿದ್ದು, ಸಿನಿಮಾದ ಮೇಕಿಂಗ್ ಭಿನ್ನವಾಗಿದೆ. ಸಿನಿಮಾದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದಾರೆ.

