Bengaluru 27°C
Ad

ಕೊಲೆ ಕೇಸ್‌; ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಯುವಕನೊಬ್ಬನ ಮೇಲೆ ಹಲ್ಲೆ ಪ್ರಕರಣ​: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಬೆಂಗಳೂರು: ಯುವಕನೊಬ್ಬನ ಮೇಲೆ ಹಲ್ಲೆ ಕೇಸ್​ನಲ್ಲಿ ಕಾಮಾಕ್ಷಿಪಾಳ್ಯದ ಪೊಲೀಸರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಬೆಂಗಳೂರಿನ ಆರ್​ಆರ್ ನಗರ ಮನೆಯಲ್ಲಿದ್ದ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಸಿಪಿ ಗಿರೀಶ್ ನೇತೃತ್ವದ ತಂಡ ಅವರನ್ನು ಬಂಧಿಸಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ದರ್ಶನ್ ಹಲ್ಲೆಯಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

ಹೊಡೆಯುವ ಬರದಲ್ಲಿ ಮರ್ಮಾಂಗಕ್ಕೆ ಒದೆ ಬಿದ್ದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ.

ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು.

ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

Ad
Ad
Nk Channel Final 21 09 2023
Ad