ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ತುಳು ಸಿನಿಮಾ ನವಂಬರ್ ನಲ್ಲಿ ತೆರೆಗೆ

ತುಳು ಸಿನಿಮಾರಂಗದ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ ಸರ್ಕಸ್ ತುಳು ಸಿನಿಮಾ ನವಂಬರ್ ನಲ್ಲಿ ರಾಜ್ಯಾದ್ಯಂತ ತೆರೆ ಕಾಣಲಿದೆ.ಜೊತೆಗೆ ಸಿನಿಮಾವನ್ನು ಏಕಕಾಲದಲ್ಲಿ ವಿದೇಶದಲ್ಲೂ‌ ಬಿಡುಗಡೆಗೊಳಿಸಲು ಯೋಜನೆ ರೂಪಿಸಿದ್ದಾರೆ.

ತುಳು ಸಿನಿಮಾರಂಗದಲ್ಲಿ ಗಿರಿಗಿಟ್ ಸಿನಿಮಾ ಭರ್ಜರಿ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ತುಳು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟರಾಗಿದ್ದಾರೆ. ಈ ಮಧ್ಯೆ ಕನ್ನಡದಲ್ಲಿ ‘ಗೋವಿಂದಾ ಗೋವಿಂದಾ’ ಸಹಿತ ಎರಡ್ಮೂರು ಸಿನಿಮಾದಲ್ಲೂ ನಟಿಸಿದ ಅನುಭವ ಅವರಿಗಿದೆ. ಕಳೆದ ವರ್ಷ ಲಾಕ್ ಡೌನ್ ಸಂದರ್ಭ ಇದೇ ತಂಡದಿಂದ ತೆರೆಕಂಡ ಗಮ್ಜಾಲ್ ಕೂಡಾ ಪ್ರೇಕ್ಷಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

ಇದೀಗ ರೂಪೇಶ್ ಶೆಟ್ಟಿ ತಂಡ ಸರ್ಕಸ್ ಸಿನಿಮಾ ನಿರ್ಮಾಣ ಮಾಡಿ ಬಿಡುಗಡೆಗಾಗಿ ನವಂಬರ್ ತಿಂಗಳಿನಲ್ಲಿ ದಿನ ನಿಗದಿಗೊಳಿಸಿದ್ದಾರೆ.

ಪ್ರತೀ ಚಿತ್ರದಲ್ಲೂ ಹೊಸತನ ಬಯಸುವ ರೂಪೇಶ್ ಶೆಟ್ಟಿ ಈ ಬಾರಿ ಕೂಡಾ ಒಂದು ಉತ್ತಮ ಕಥೆಯನ್ನು ಆಯ್ಕೆ ಮಾಡಿದ್ದಾರೆ. ಗಿರಿಗಿಟ್, ಗಮ್ಜಾಲ್ ಗೆ ಸಂಭಾಷಣೆ ಬರೆದ ಪ್ರಸಣ್ಣ ಶೆಟ್ಟಿ ಬೈಲೂರು ಈ ಸಿನಿಮಾಕ್ಕೂ ಸಂಭಾಷಣೆ ಬರೆದಿದ್ದಾರೆ.

ರೂಪೇಶ್ ಶೆಟ್ಟಿ ಅವರು ತನ್ನದೇ ಆದ ಒಂದು ತಂಡವನ್ನು ಕಟ್ಟಿ ಕೊಂಡಿದ್ದಾರೆ. ಹೀಗಾಗಿ ಅವರ ಕೆಲಸ ಕಾರ್ಯಗಳು ಅವರು ಎಣಿಸಿದಂತೆ ಬಹು ಸುಲಭ ಆಗುತ್ತಿದೆ. ರೂಪೇಶ್ ಈ ಬಾರಿ ತುಳುವಿಗೊಬ್ಬ ಹೊಸ ಖಳನಟನನ್ನು ತುಳುವಿಗೆ ಪರಿಚಯಿಸುತ್ತಿದ್ದಾರೆ.

ಯಶ್ ಶೆಟ್ಟಿ ಎಂಬವರು ಸಲಗ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಬಂದವರು. ಯಶ್ ಈಗ ಸರ್ಕಸ್ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಅದೇ ರೀತಿ ರಚನಾ ರೈ ಎಂಬ ನಟಿಯನ್ನು ರೂಪೇಶ್ ತುಳುವಿಗೆ ಪರಿಚಯಿಸುತ್ತಿದ್ದಾರೆ. ‘ಗಿರಿಗಿಟ್‌’ ತುಳು ಚಿತ್ರಗಳ ಪೈಕಿ ಅತ್ಯಂತ ಯಶಸ್ವಿಯಾದ ಹಾಸ್ಯಮಯ ಚಿತ್ರ. ಹಲವು ದೇಶಗಳಲ್ಲಿ ಗಿರಿಗಿಟ್ ಬಿಡುಗಡೆ ಗೊಂಡು ಭರ್ಜರಿ ಪ್ರದರ್ಶನ ಕಂಡಿದೆ.

ಈಗ ಅದೇ ತಂಡ ‘ಸರ್ಕಸ್‌’ ಸಿನಿಮಾ ಮಾಡಿದೆ. ‘ಸರ್ಕಸ್‌’ ಶೀರ್ಷಿಕೆ ಕನ್ನಡದಲ್ಲಿ ಈಗಾಗಲೇ ಯಶಸ್ವಿಯಾದ ಚಿತ್ರದ ಹೆಸರು. ಹಿಂದಿಯಲ್ಲೂ ಮುಂದಿನ ವರ್ಷ ಇದೇ ಹೆಸರಿನ ಚಿತ್ರವೊಂದು ತೆರೆ ಕಾಣಲಿದೆ. ತುಳು ಚಿತ್ರಗಳ ಸಾಮಾನ್ಯ ಪ್ರಕಾರವೇ ಹಾಸ್ಯ. ‘ಸರ್ಕಸ್‌’ನಲ್ಲೂ ಅದೇ ಪ್ರಧಾನ ವಸ್ತು. ರೂಪೇಶ್‌ ಶೆಟ್ಟಿ ನಿರ್ದೇಶಿಸಿ ಪ್ರಧಾನ ಪಾತ್ರ ನಿರ್ವಹಿಸುತ್ತಿದ್ದಾರೆ. ಇಲ್ಲಿ ರಾಕೇಶ್‌ ಕದ್ರಿ ಕ್ರಿಯೆಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ.

ಉಳಿದಂತೆ ತುಳು ಚಿತ್ರರಂಗದ ಘಟಾನುಘಟಿ ಕಲಾವಿದರಾದ ನವೀನ್‌ ಡಿ. ಪಡೀಲ್‌, ಭೋಜರಾಜ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ ಕುಡ್ಲ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಚಂದ್ರಹಾಸ ಉಳ್ಳಾಲ್, ನಿತೇಶ್ ಶೆಟ್ಟಿ ಎಕ್ಕಾರ್, ರೂಪಾ ವರ್ಕಾಡಿ, ಪಂಚಮಿ ಭೋಜರಾಜ್, ತಾರಾಗಣದಲ್ಲಿದ್ದಾರೆ.

ಸಿನಿಮಾಕ್ಕೆ 25 ದಿನಗಳ ಚಿತ್ರೀಕರಣ ನಡೆದಿದೆ. ಆರ್ ಎಸ್ ಸಿನಿಮಾ ಮತ್ತು ಶೂಲಿನ್ ಫಿಲ್ಮ್ ಲಾಂಛನದಡಿಯಲ್ಲಿ ಸರ್ಕಸ್ ಸಿನಿಮಾ ತಯಾರಾಗಿದೆ. ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ, ಮಂಜುನಾಥ ಅತ್ತಾವರ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಮಂಗಳೂರು, ಮರವೂರು ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ.

ಸಂಭಾಷಣೆ ಪ್ರಸಣ್ಣ ಶೆಟ್ಟಿ ಬೈಲೂರು, ನವೀನ್ ಶೆಟ್ಟಿ ನೃತ್ಯ ನಿರ್ದೇಶನ, ನಿರಂಜನ ದಾಸ್ ಕ್ಯಾಮರಾ, ರಾಹುಲ್ ವಶಿಷ್ಠ ಸಂಕಲನ ಈ ಚಿತ್ರಕ್ಕಿದೆ. ಗಿರಿಗಿಟ್ ಬಳಿಕ ರೂಪೇಶ್ ನಿರ್ದೇಶಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ.

Gayathri SG

Recent Posts

ಇಂದಿನ ರಾಶಿ ಭವಿಷ್ಯ : ಈ ರಾಶಿಗೆ ಹಣಕಾಸಿನ ಸಮಸ್ಯೆ

ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 13 ಮೇ​​ 2024ರ…

11 mins ago

96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 4ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ (4ನೇ ಹಂತವು ಇಂದು (ಮೇ 13) 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ. ಇಂದು 96…

23 mins ago

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

8 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

9 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

9 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

9 hours ago