ಕೋಸ್ಟಲ್ ವುಡ್

ಗಬ್ಬರ್ ಸಿಂಗ್ ತುಳು ಸಿನಿಮಾ ಸೆನ್ಸಾರ್ ಗೆ, ಡಿಸೆಂಬರ್ ನಲ್ಲಿ ತೆರೆಗೆ

ಮಂಗಳೂರು: ಟೈಟಲ್, ಪೋಸ್ಟರ್ ನಿಂದಲೇ ಕುತೂಹಲ ಕೆರಳಿಸಿರೋ “ಗಬ್ಬರ್ ಸಿಂಗ್” ತುಳುಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡಿದ್ದು, ಸಿನಿಮಾವನ್ನು ಸೆನ್ಸಾರ್ ಗೆ ಕಳುಹಿಸಲಾಗಿದೆ ಎಂದು ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು ತಿಳಿಸಿದ್ದಾರೆ.

ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದಲ್ಲಿ ತಯಾರಾದ ಗಬ್ಬರ್ ಸಿಂಗ್ ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

“ಗಬ್ಬರ್ ಸಿಂಗ್” ಆಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಮುಂದಿನ ಡಿಸೆಂಬರ್ ಹೊತ್ತಿಗೆ ತುಳುವರ ಮುಂದೆ ಹಾಜರಾಗುವ ಇರಾದೆ ಚಿತ್ರತಂಡಕ್ಕಿದೆ. ಸಿನಿಮಾಕ್ಕೆ ಕತೆ, ಚಿತ್ರಕತೆ, ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ಬೈಕಾಡಿ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ. ಮುಖ್ಯ ಪಾತ್ರದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ಪ್ರಜ್ವಲ್ ಪ್ರಕಾಶ್, ಉದಯ ಆಳ್ವ ಇಡ್ಯಾ, ಶಶಿ ಬೆಳ್ಳಾಯರು, ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಭವ್ಯಾ ಶೆಟ್ಟಿ, ಲಹರಿ ಶೆಟ್ಟಿ ಪಡ್ರೆ, ವೀಣಾ ಶೆಟ್ಟಿ, ಶಿಲ್ಪಾ ಶೆಟ್ಟಿ, ಸಂತೋಷ್ ಮೊದಲಾದವರಿದ್ದಾರೆ. ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಸಂಗೀತ: ಡೊಲ್ವಿನ್ ಕೊಳಲಗಿರಿ. ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್ ಮಾಣಿ, ಕಲೆ: ವೆಂಕಟೇಶ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್. ಸಿನಿಮಾಕ್ಕೆ ಶಶಿರಾಜ್ ಕಾವೂರು, ಪ್ರಶಾಂತ್ ಸಿ.ಕೆ, ಅರುಣ್ ಲೀವಿಸ್, ಉಮೇಶ್ ಮಿಜಾರ್ ಗೀತಾ ಸಾಹಿತ್ಯ ಒದಗಿಸಿದ್ದಾರೆ.

ಡಿಸೆಂಬರ್ ನಲ್ಲಿ ತೆರೆಗೆ
ಗಬ್ಬರ್ ಸಿಂಗ್ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾ ಡಿಸೆಂಬರ್ ನಲ್ಲಿ ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಬಾರ್ಕೂರು ಸತೀಶ್ ಪೂಜಾರಿ ತಿಳಿಸಿದ್ದಾರೆ.

Gayathri SG

Recent Posts

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

6 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

8 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

17 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

32 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

45 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

48 mins ago