ನ.11ರಂದು ಲಾಸ್ಟ್ ಬೆಂಚ್ ಕರಾವಳಿಯಾದ್ಯಂತ ತೆರೆಗೆ

ಮಂಗಳೂರು: ಎ.ಎಸ್. ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ಆಶೀಕಾ ಸುವರ್ಣ ನಿರ್ಮಾಣದಲ್ಲಿ ಪ್ರಧಾನ್ ಎಂಪಿ ನಿರ್ದೇಶನದಲ್ಲಿ ತಯಾರಾದ ವಿಐಪೀಸ್ ಲಾಸ್ಟ್ ಬೆಂಚ್ ತುಳು-ಕನ್ನಡ ಸಿನಿಮಾ ನವಂಬರ್ ೧೧ ರಂದು ತೆರೆ ಕಾಣಲಿದೆ.

ಈ ಸಿನಿಮಾಕ್ಕೆ ಒಂದೇ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚಿತ್ರೀಕರಣ ನಡೆಸಲಾಗಿದೆ. ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬಾರ್, ರೂಪೇಶ್ ಶೆಟ್ಟಿ, ವಿನೀತ್ ಕುಮಾರ್, ಅಥರ್ವ ಪ್ರಕಾಶ್ ಪಾಂಡೇಶ್ವರ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ವಿನಾಯಕ, ರವಿ ರಾಮಕುಂಜ, ಪ್ರವೀಣ್ ಮರ್ಕಮೆ, ಆರಾಧ್ಯ ಶೆಟ್ಟಿ, ನಿರಿಕ್ಷಾ ಶೆಟ್ಟಿ ಪುತ್ತೂರು, ರೂಪ ವರ್ಕಾಡಿ, ಅನಿತಾ, ಐಸಿರಿ, ಪ್ರಾರ್ಥನಾ ಸುವರ್ಣ, ಮೊದಲಾದ ಬಹು ತಾರಾಗಣ ಈ ಸಿನಿಮಾದಲ್ಲಿದೆ.

ಮುಖ್ಯವಾಗಿ ತುಳು ಸಿನಿಮಾರಂಗದ ಖ್ಯಾತ ನಾಮ ಕಲಾವಿದರಾದ ಪೃಥ್ವಿ ಅಂಬಾರ್, ರೂಪೇಶ್ ಶೆಟ್ಟಿ, ವಿನಿತ್ ಕುಮಾರ್ ಮೊದಲ ಬಾರಿಗೆ ಈ ಸಿನಿಮಾದ ಮೂಲಕ ಒಟ್ಟಾಗಿ ಕಾಣಿಸಿಕೊಂಡಿರುವುದು ಈ ಸಿನಿಮಾದ ವಿಶೇಷತೆಯಾಗಿದೆ.

ಮಲ್ಟಿ ಸ್ಟಾರ್ಸ್ ಕಲಾವಿದರ ಜೊತೆಗೆ ಹಾಸ್ಯ ಕಲಾವಿದರ ದೊಡ್ಡ ದಂಡೇ ಈ ಸಿನಿಮಾದಲ್ಲಿ ಇದೆ. ಹೀಗಾಗಿ ನಗುವಿಗೆ ಬರವಿಲ್ಲ. ಅಲ್ಲದೆ ಹೊಸ ಕಲಾವಿದರಿಗೂ ಅಭಿನಯಿಸಲು ನಿರ್ದೇಶಕರು ಅವಕಾಶ ಮಾಡಿ ಕೊಟ್ಟಿದ್ದಾರೆ. ಲಾಸ್ಟ್ ಬೆಂಚ್ ಸಿನಿಮಾದ ಮೊದಲ ಪೋಸ್ಟರ್ ಇತ್ತೀಚೆಗೆ ಸಿಟಿ ಸೆಂಟರ್ ಮಾಲ್ ನಲ್ಲಿ ಬಿಡುಗಡೆಗೊಂಡಿತು.

ಪ್ರಧಾನ್ ಎಂಪಿ ನಿರ್ದೇಶನದ ಸಿನಿಮಾಕ್ಕೆ ಕೀರ್ತನ್ ಭಂಡಾರಿ ಮತ್ತು ಸೃಜನ್ ಪೇಜಾವರ್ ಸಾಹಿತ್ಯ- ಸಂಭಾಷಣೆ ರಚಿಸಿದ್ದಾರೆ. ಸಹ ನಿರ್ದೇಶಕರಾಗಿ ರಜು ಬಿಲಿಗಿರಿ, ಆನಂದ್, ಸುಮನ್ ಸುವರ್ಣ, ಹರೀಶ್ ಇದ್ದಾರೆ. ಕ್ಯಾಮರಾ ಪ್ರಸಣ್ಣ ಕುಮಾರ್, ವಿನಾಯಕ ಆಚಾರ್ಯ, ಸಂಕಲನ ಸಚಿನ್, ಸಂಗೀತ ವಿನ್ಯಾಸ್ ಮದ್ಯ, ಈ ಸಿನಿಮಾಕ್ಕೆ ಅಶಿಕಾ ಸುವರ್ಣ ನಿರ್ಮಾಪಕರಾಗಿದ್ದು, ಕಿರಣ್ ಶೆಟ್ಟಿ ಸಹ ನಿರ್ಮಾಪಕರಾಗಿದ್ದಾರೆ. ಕಿಶೋರ್ ಕಾರ್ಯಕಾರಿ ನಿರ್ಮಾಪಕರಾಗಿರುತ್ತಾರೆ.

ಕಥಾಹಂದರ:
ವಿಐಪೀಸ್ ಲಾಸ್ಟ್ ಬೆಂಚ್ ತುಳುವಿನ ಮೊದಲ ಬಹು ನಾಯಕರಿರುವ ಸಿನಿಮಾ ಆಗಿದೆ. ಇದು ಮೂರು ಬೇಜವಾಬ್ದಾರಿ ಹುಡುಗರ ಕಾಲೇಜು ಜೀವನದ ಕಥೆಯನ್ನು ಹೊಂದಿದೆ. ಆದರೆ ಅವರು ಅತಿಯಾಗಿ ಪ್ರೀತಿಸುತ್ತಿದ್ದ ಬಾಲಕನಿಂದ ಕಥೆಗೆ ಹೊಸ ತಿರುವು ಸಿಗುತ್ತದೆ.

ಈ ಸಿನಿಮಾವು ಹಾಸ್ಯ ಪ್ರಧಾನವಾಗಿದ್ದರೂ ಸೆಂಟಿಮೆಂಟಲ್ ಕಥೆಯನ್ನೂ ಹೊಂದಿದೆ. ಒಂದು ಕಥೆ ಹಾಸ್ಯದ ಹೊನಲು, ಮತ್ತೊಂದು ಭಾವನಾತ್ಮಕ ಸನ್ನಿವೇಶಗಳ ಮಿಶ್ರಣವಾಗಿರುವ ಈ ಕಥೆಯಲ್ಲಿ ಪ್ರೇಕ್ಷಕರಿಗೆ ಹೊಟ್ಟೆ ತುಂಬಾ ನಗಾಡಲು ಯಥೇಚ್ಛ ಅವಕಾಶಗಳಿವೆ. ಕೋಸ್ಟಲ್‌ವುಡ್‌ನ ಖ್ಯಾತನಾಮ ಕಲಾವಿದರೆಲ್ಲರೂ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಸಿನಿಮಾವನ್ನು ಮಂಗಳೂರು ಸುತ್ತಮುತ್ತಲಿನ ಹಲವಾರು ಅತ್ಯಾಕರ್ಷಕ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದ್ದು, ಅಕ್ಟೋಬರ್ ತಿಂಗಳಿನಲ್ಲಿ ಏಕ ಕಾಲಕ್ಕೆ ತುಳು ಮತ್ತು ಕನ್ನಡ ಭಾಷೆಗಳಲ್ಲಿ ಲಾಸ್ಟ್ ಬೆಂಚ್ ಚಿತ್ರ ತೆರೆಕಾಣಲಿದೆ. ಜೊತೆಗೆ ವಿದೇಶಗಳಲ್ಲೂ ಸಿನಿಮಾ ತೆರೆಕಾಣಿಸುವ ಉದ್ದೇಶದಿಂದ ಕೆಲಸ ಕಾರ್ಯಗಳು ನಡೆಯುತ್ತಿದೆ.

Gayathri SG

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

5 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

21 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

43 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago