Categories: ಮನರಂಜನೆ

ಲಿಯೋ ಡೈರೆಕ್ಟರ್ ಲೋಕೇಶ್ ಕನಗರಾಜ್​ ವಿರುದ್ಧ ದೂರು

ಚೆನ್ನೈ  : ಲಿಯೋ ಡೈರೆಕ್ಟರ್ ಲೋಕೇಶ್ ಕನಗರಾಜ್ ಗೆ ಸಂಕಷ್ಟ ಎದುರಾಗಿದೆ. ಇವರ ವಿರುದ್ಧ ನ್ಯಾಯಾಲಯಲದಲ್ಲಿ ದೂರು ದಾಖಲಾಗಿದೆ.

ಸ್ಟಾರ್‌ ಡೈರೆಕ್ಟರ್ ಲೋಕೇಶ್ ಕನಗರಾಜ್ ವಿರುದ್ಧ ರಾಜ ಮುರುಗನ್ ಎಂಬ ವ್ಯಕ್ತಿ ಮಧುರೈ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಲಿಯೋ ಸಿನಿಮಾದಲ್ಲಿ ಬಹುತೇಕ ದೃಶ್ಯಗಳು ಹಿಂಸಾತ್ಮಕವಾಗಿವೆ. ಬಂದೂಕು, ಚಾಕು, ಕಬ್ಬಿಣದ ಸರಳುಗಳಿಂದ ಹಿಂಸಾತ್ಮಕತೆಯನ್ನು ಹೆಚ್ಚು ತೋರಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳನ್ನು ಕೊಲ್ಲುವ ದೃಶ್ಯಗಳಿವೆ, ಮಾದಕದ್ರವ್ಯ ಸೇವನೆ ಮತ್ತು ಜನರನ್ನು ಹಿಂಸಿಸುವ ಸೀನ್​ಗಳನ್ನ ಹೆಚ್ಚು ತೋರಿಸಲಾಗಿದೆ.

ಪೊಲೀಸ್ ಇಲಾಖೆಯ ನೆರವಿನಿಂದ ಎಲ್ಲ ರೀತಿಯ ಕ್ರಿಮಿನಲ್ ಚಟುವಟಿಕೆಗಳನ್ನು ಮಾಡಬಹುದು ಎಂಬ ದೃಶ್ಯಗಳೂ ಚಿತ್ರದಲ್ಲಿವೆ. ಇದರಿಂದ ಸಿನಿಮಾ ನೋಡುವ ಚಿಕ್ಕ ಮಕ್ಕಳು ದಾರಿತಪ್ಪುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ರಾಜ ಮುರುಗನ್ ತಿಳಿಸಿದ್ದಾರೆ.

Ramya Bolantoor

Recent Posts

ಜೀನ್ಸ್ ಪ್ಯಾಂಟ್ , ಟೀ ಶರ್ಟ್‍ಗಳಲ್ಲಿ ಅಕ್ರಮ ಚಿನ್ನ ಸಾಗಾಟ: ನಾಲ್ವರು ವಶಕ್ಕೆ

ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

3 mins ago

ಆರ್‌ಸಿಬಿ vs ಸಿಎಸ್ಕೆ: ಚಾಲೆಂಜ್ ಹಾಕಿ ಖಾಕಿ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್

ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…

16 mins ago

ಶೂ ವ್ಯಾಪಾರಿ ಮನೆಯಿಂದ 40 ಕೋಟಿ ರೂ. ನಗದು ವಶಕ್ಕೆ

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್‌ ಡಂಗ್‌…

20 mins ago

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

44 mins ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

55 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

1 hour ago