ಮುಂಬೈ: ಕಳೆದ ಕೆಲವು ವರ್ಷಗಳಿಂದ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ ನಿರಂತರ ಜೀವ ಬೆದರಿಕೆ ಕರೆ ಬರುತ್ತಿವೆ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಹೇಳಿದ್ದಾರೆ.
ಕೆಲವು ತಿಂಗಳ ಹಿಂದೆ ತಮ್ಮ ಮನೆ ಮೇಲೆ ನಡೆದ ದಾಳಿ ಬಗ್ಗೆ ಇದೀಗ ಮಾತನಾಡಿರುವ ಸಲ್ಲು, ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನನ್ನನ್ನು ಕೊಲ್ಲಲು ಸಕಲ ಪ್ರಯತ್ನವನ್ನೂ ನಡೆಸುತ್ತಿದೆ. ಗುಂಡಿನ ದಾಳಿ ಬಳಿ ನನ್ನ ಕುಟುಂಬಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಮುಂಬೈ ಕ್ರೈಂ ಬ್ರ್ಯಾಂಚ್‌ಗೆ ವಿಚಾರಣೆ ವೇಳೆ ಮಾಹಿತಿ ನೀಡಿದ ಸಲ್ಮಾನ್, ಅಂದು ನನಗೆ ಪಟಾಕಿಯಂತಹ ಸದ್ದು ಕೇಳಿಸಿತ್ತು. ಸುಮಾರು ಬೆಳಗ್ಗೆ 4.55 ಗಂಟೆ ಹೊತ್ತಿಗೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಬಾಲ್ಕನಿಯನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು. ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಗುರಿಯಾಗಿಸಿ ಆ ದಾಳಿ ನಡೆದಿತ್ತು ಎಂದು ತಿಳಿಸಿದರು.

