Bengaluru 22°C
Ad

ರಮೇಶ್ ಅರವಿಂದ್ ಅವರ ಹುಟ್ಟುಹಬ್ಬಕ್ಕೆ ರಿಲೀಸ್ ಆಯ್ತು’ದೈಜಿ’ ಚಿತ್ರದ ಪೋಸ್ಟರ್

Aijid

ಸ್ಯಾಂಡಲ್ವುಡ್ ನ ಖ್ಯಾತ ಹಿರಿಯ ನಟ ರಮೇಶ ಅರವಿಂದ್ ಇಂದು 60ನೇ ವಸಂತಕ್ಕೆ ಕಾಲಿಟ್ಟಿದ್ದು ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಇಂದು ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ಚಿತ್ರತಂಡ ಪೋಸ್ಟರ್ ಒಂದನ್ನು ಬಿಡುಗಡೆ ಮಾಡುವ ಮೂಲಕ ಹುಟ್ಟು ಹಬ್ಬದ ಶುಭಾಶಯ ತಿಳಿಸಿದೆ.

ಹೌದು. . ಶಿವಾಜಿ ಸುರತ್ಕಲ್ ಭಾಗ 1 ಮತ್ತು 2 ರ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರಕ್ಕೆ ನಟ ರಮೇಶ್ ಅರವಿಂದ್ ಮತ್ತು ನಿರ್ದೇಶಕ ಆಕಾಶ್ ಶ್ರೀವತ್ಸ ಕೈಜೋಡಿಸಿದ್ದಾರೆ. ರಮೇಶ್ ಅರವಿಂದ್ ಅವರ ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ ಮಾಡಿದ್ದು, ಈ ಚಿತ್ರಕ್ಕೆ ‘ದೈಜಿ’ ಎಂದು ಹೆಸರಿಡಲಾಗಿದೆ. ಈ ಸಿನಿಮಾದ ಪೋಸ್ಟರ್ ಅನ್ನು ಖ್ಯಾತ ಕಲಾವಿದ ವಿಲಾಸ್ ನಾಯಕ್ ತಮ್ಮದೇ ಆ ಕುಂಚದಲ್ಲಿ ಸೆರೆ ಹಿಡಿದಿದ್ದಾರೆ. ಆ ಪೇಟಿಂಗ್ ಅನ್ನು ಚಿತ್ರತಂಡಕ್ಕೆ ಅವರು ಅರ್ಪಿಸಿದ್ದಾರೆ.

ರಮೇಶ್ ಅರವಿಂದ್ ಅವರ ನೂರಾಆರನೇ ಚಿತ್ರ ಇದಾಗಿದ್ದು, ತನ್ನ ಟೈಟಲ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದೆ ಆಕಾಶ್ ಶ್ರೀವತ್ಸ ಆಕ್ಷನ್ ಕಟ್ ಹೇಳಿದ್ದು, ವಿಭಾ ಕಶ್ಯಪ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ರವಿ ಕಶ್ಯಪ್ ನಿರ್ಮಾಣ ಮಾಡಿದ್ದಾರೆ. ಕಳೆದ ವರ್ಷ ರಮೇಶ್ ಅರವಿಂದ್ ಅವರ ಜನ್ಮದಿನದಂದೆ ಈ ಚಿತ್ರದ ಟೈಟಲ್ ಅನ್ನು ಅನೌನ್ಸ್ ಮಾಡಲಾಗಿತ್ತು.ಇದೀಗ ಮತ್ತೊಂದು ಪೋಸ್ಟರ್ ಬಿಡುಗಡೆಯಾಗಿದ್ದು ರಮೇಶ್ ಅರವಿಂದ್ ಅವರ ಈ ಲುಕ್ ಗೆ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರದ ನಾಯಕಿಗೂ ಆಗಲೇ ಹುಡುಕಾಟ ಪ್ರಾರಂಭವಾಗಿದೆ. ಚಿತ್ರೀಕರಣ ಡಿಸೆಂಬರ್ ಅಥವಾ ಜನವರಿ ತಿಂಗಳಿನಲ್ಲಿ ಪ್ರಾರಂಭವಾಗಲಿದೆ. ಚಿತ್ರವು ಸಂಪೂರ್ಣವಾಗಿ ಅಮೆರಿಕದಲ್ಲಿ ಚಿತ್ರೀಕರಣವಾಗಲಿದೆ ಎಂದು ತಿಳಿದು ಬಂದಿದೆ.

Ad
Ad
Nk Channel Final 21 09 2023