ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಇದೀಗ ದರ್ಶನ್ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಶಿವರಾಜ್‌ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ನಟ ಶಿವರಾಜ್‌ಕುಮಾರ್ ಮಾತನಾಡಿ, ಏನು ಮಾಡೋಕೆ ಆಗಲ್ಲ ಹಣೆ ಬರಹ ಅಂತ ಬಂದಾಗ ನಾವು ಏನೇ ಮಾತನಾಡೋಕೆ ಹೋದರು ತಪ್ಪಾಗುತ್ತದೆ ಎಂದಿದ್ದಾರೆ. ಈ ಘಟನೆಯ ಬಗ್ಗೆ ಬೇಸರ ಆಗುತ್ತದೆ. ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ.

ಈ ಘಟನೆಯಿಂದ ರೇಣುಕಾಸ್ವಾಮಿ ಮತ್ತು ದರ್ಶನ್ ಫ್ಯಾಮಿಲಿಗೂ ನೋವಾಗಿರುತ್ತದೆ. ನಾವು ಎಂದಿಗೂ ನ್ಯಾಯಕ್ಕೆ ತಲೆ ಬಾಗಲೇಬೇಕು ಎಂದಿದ್ದಾರೆ.