Bengaluru 21°C
Ad

ಚಾರ್ಜ್​ಶೀಟ್​ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಕೋರ್ಟ್ ಮೊರೆ ಹೋದ ದರ್ಶನ್‌

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿರುವ ದರ್ಶನ್‌ ಅವರ ಕೋರ್ಟ್​ಗೆ ಸಲ್ಲಿಕೆ ಆದ ಚಾರ್ಜ್​ಶೀಟ್​ನ ವಿಚಾರಗಳ ಬಗ್ಗೆ ಮಾಧ್ಯಮಗಳು ಇಂಚಿಂಚೂ ಬಿಡದೇ ವರದಿ ಮಾಡುತ್ತಿವೆ. ದರ್ಶನ್ ಅವರ ಕ್ರೌರ್ಯ ಯಾವ ರೀತಿಯಲ್ಲಿ ಇತ್ತು ಎಂಬದನ್ನು ವಿವರಿಸಲಾಗುತ್ತಿದೆ.

ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿರುವ ದರ್ಶನ್‌ ಅವರ ಕೋರ್ಟ್​ಗೆ ಸಲ್ಲಿಕೆ ಆದ ಚಾರ್ಜ್​ಶೀಟ್​ನ ವಿಚಾರಗಳ ಬಗ್ಗೆ ಮಾಧ್ಯಮಗಳು ಇಂಚಿಂಚೂ ಬಿಡದೇ ವರದಿ ಮಾಡುತ್ತಿವೆ. ದರ್ಶನ್ ಅವರ ಕ್ರೌರ್ಯ ಯಾವ ರೀತಿಯಲ್ಲಿ ಇತ್ತು ಎಂಬದನ್ನು ವಿವರಿಸಲಾಗುತ್ತಿದೆ. ಈಗ ದರ್ಶನ್ ಅವರು ಇದಕ್ಕೆ ನಿರ್ಬಂಧ ಕೋರಿ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲರು ಈ ವಿಚಾರದಲ್ಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸದ್ಯ ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಾರ್ಜ್​ಶೀಟ್​​​​ನಲ್ಲಿನ ಗೌಪ್ಯ ಮಾಹಿತಿ ಬಹಿರಂಗಪಡಿಸದಂತೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

Ad
Ad
Nk Channel Final 21 09 2023