ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಮತ್ತು ಅವರ ಗ್ಯಾಂಗ್ 16 ಮಂದಿ ಬಂಧನದಲ್ಲಿದ್ದಾರೆ. ದರ್ಶನ್ ಬಂಧನವಾಗಿ ಈಗಾಗಲೇ ಮೂರು ತಿಂಗಳುಗಳೇ ಕಳೆದು ಹೋಗಿವೆ. ಈವರೆಗೆ ದರ್ಶನ್ ಕಡೆಯಿಂದ ಜಾಮೀನಿಗೆ ಅರ್ಜಿ ಸಲ್ಲಿಕೆ ಆಗಿಲ್ಲ. ಇಂದು (ಸೆಪ್ಟೆಂಬರ್ 12) ಕೋರ್ಟ್ ಎದುರು ದರ್ಶನ್ ಅವರನ್ನು ಹಾಜರುಪಡಿಸಲಾಗುತ್ತಿದೆ. ಇಂದಿಗೆ ಅವರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ.
ಸೆಪ್ಟೆಂಬರ್ 9ರಂದು ದರ್ಶನ್ ಅವರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು. ಈ ವೇಳೆ ಚಾರ್ಜ್ಶೀಟ್ ಪ್ರತಿಯನ್ನು ಆರೋಪಿ ಪರ ವಕೀಲರಿಗೆ ನೀಡಲಾಗಿತ್ತು. ಆ ಬಳಿಕ ಜಡ್ಜ್ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರವರೆಗೆ ವಿಸ್ತರಣೆ ಮಾಡಿದ್ದರು.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 3991 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಹೇಳಿಕೆ ಉಲ್ಲೇಖ ಆಗಿದೆ. ವಿಚಾರಣೆ ವೇಳೆ ದರ್ಶನ್ ಅವರು ತಾವು ಹಲ್ಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ, ಎಲ್ಲಿಯೂ ಕೊಲೆಯನ್ನು ಇವರೇ ಮಾಡಿದ್ದಾರೆ ಎಂಬ ವಿಚಾರ ಉಲ್ಲೇಖ ಆಗಿಲ್ಲ.