ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಲಾರ್ ಸಿನಿಮಾ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿಶ್ವದಾದ್ಯಂತ ಕೋಟಿ ಕೋಟಿ ಹಣವನ್ನು ಗಳಿಸಿದೆ.
ಈ ಸಿನಿಮಾ ಸ್ಪ್ಯಾನಿಷ್ ಭಾಷೆಯಲ್ಲಿ ಮಾರ್ಚ್ 7 ರಂದು ರಿಲೀಸ್ ಆಗಲಿದೆ. ಈಗಾಗಲೇ ಸ್ಪ್ಯಾನಿಷ್ ಭಾಷೆಗೆ ಚಿತ್ರವನ್ನು ಡಬ್ ಮಾಡಲಾಗುತ್ತಿದೆ. ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ 627 ಕೋಟಿ ರೂಪಾಯಿ ಅಧಿಕ ಗಳಿಸಿದೆ. ಈ ನಡುವೆ ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರುಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದು, ಅದರ ಪ್ರಕಾರ ಸಲಾರ್ 2 ಸಿನಿಮಾ 2025ರಲ್ಲಿ ಬಿಡುಗಡೆ ಆಗಿದೆ.
ಸಲಾರ್ 2 ಸಿನಿಮಾದ ಸ್ಕ್ರಿಪ್ಟ್ ರೆಡಿಯಾಗಿದೆ. ಇನ್ನೂ ಕೆಲವೇ ದಿನಗಳಲ್ಲಿ ಸಲಾರ್ 2 ಸಿನಿಮಾದ ಕುರಿತಂತೆ ನಿರ್ದೇಶಕ ಪ್ರಶಾಂತ್ ನೀಲ್ ಕೆಲಸ ಕೂಡ ಶುರು ಮಾಡಲಿದ್ದಾರೆ ಎಂದು ಎಂದು ವಿಜಯ್ ಹೇಳಿದ್ದಾರೆ.