ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಇಂದು (ಸೆ.8) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಣ್‌ವೀರ್ ಸಿಂಗ್ ತಂದೆಯಾದ ಸಂಭ್ರಮದಲ್ಲಿದ್ದಾರೆ.
ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆ ನಟಿ ದೀಪಿಕಾ ಹೆಣ್ಣ ಮಗುವಿಗೆ ಜನ್ಮ ನೀಡಿರುವುದು ಕುಟುಂಬದಲ್ಲಿ ಸಂತಸ ಮೂಡಿಸಿದೆ. ಮಗು ಮತ್ತು ದೀಪಿಕಾ ಇಬ್ಬರೂ ಆರೋಗ್ಯವಾಗಿದ್ದಾರೆ. ಸೆ.7ರಂದು ಸಂಜೆ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮನೆಗೆ ಪುಟ್ಟ ಗೌರಿಯ ಆಗಮನವಾಗಿದೆ. ಇನ್ನೂ ದೀಪಿಕಾ ಮತ್ತು ರಣ್‌ವೀರ್ ದಂಪತಿ ಫ್ಯಾನ್ಸ್, ಸ್ಟಾರ್ಸ್ ಶುಭಹಾರೈಸುತ್ತಿದ್ದಾರೆ.
ನಿನ್ನೆ ಗಣೇಶ ಚತುರ್ಥಿಯಂದು ಮುಂಜಾನೆ ರಣ್‌ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಒಟ್ಟಿಗೆ ಗಣೇಶ ದೇವಾಲಯಕ್ಕೆ ತೆರಳಿ ಆಶೀರ್ವಾದ ಪಡೆದರು. ಅದೇ ದಿನ ಸಂಜೆ ವೇಳೆಗೆ ರಣ್‌ವೀರ್ ಸಿಂಗ್ ದೀಪಿಕಾ ಮತ್ತು ಇಬ್ಬರ ಕುಟುಂಬದವರು ಮುಂಬೈನ ಎಚ್ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಸಂಜೆಯೇ ದೀಪಿಕಾಗೆ ಮಗು ಜನನವಾಗಲಿದೆ ಎನ್ನಲಾಗಿತ್ತು. ಆದರೆ ಇಂದು ಮಗುವಿಗೆ ಜನ್ಮ ನೀಡಿದ್ದಾರೆ ದೀಪಿಕಾ.

