ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆ ಅಂಬಾನಿ ಮನೆ ಮಗನ ಕಾರ್ಯಕ್ರಮದಲ್ಲಿ ದುಬಾರಿ ಸೀರೆಯುಟ್ಟು ಕಂಗೊಳಿಸಿದ್ದಾರೆ. ಗರ್ಭಿಣಿ ದೀಪಿಕಾ ಪಡುಕೋಣೆ ಅನಂತ್ ಅಂಬಾನಿಯ ಮದುವೆ ಕಾರ್ಯಕ್ರಮದಲ್ಲಿ ಪರ್ಪಲ್ ಕಲರ್ ಸೀರೆ ಧರಿಸಿ ಮಿಂಚಿದ್ದಾರೆ.
ಇದೇ ಸೀರೆಯಲ್ಲಿ ದೀಪಿಕಾ ಪಡುಕೋಣೆ ಬೇಬಿ ಬಂಪ್ ಫೋಟೋಶೂಟ್ ಕೂಡ ಮಾಡಿಸಿದ್ದಾರೆ. ದೀಪಿಕಾ ಧರಿಸಿದ್ದ ಈ ಸೀರೆಯ ಬೆಲೆ 1 ಲಕ್ಷದ 92 ಸಾವಿರ ರೂ. ಮೌಲ್ಯದಾಗಿದೆ. ಸದ್ಯ ಈ ಸೀರೆಯ ರೇಟ್ ಕೇಳಿ ಫ್ಯಾನ್ಸ್ ದಂಗಾಗಿದ್ದಾರೆ.
ಈ ಐಷಾರಾಮಿ ಸೀರೆಯನ್ನು ತಯಾರಿಸಲು 3,400 ತಾಸುಗಳು ಬೇಕಾಯಿತು. ಕೈಗಳಿಂದಲೇ ಹೆಚ್ಚಾಗಿ ಕಸೂತಿ ಮಾಡಿ ಸೀರೆಯನ್ನು ಸುಂದರವಾಗಿ ಕಾಣುವಂತೆ ಮಾಡಲಾಗಿದೆ.

