ಚೆನ್ನೈ: ಖ್ಯಾತ ನಟಿ ತ್ರಿಷಾ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ನಟ ಮನ್ಸೂರ್ ಅಲಿಖಾನ್ ಗೆ ಮದ್ರಾಸ್ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದ್ದು, ತ್ರಿಷಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಅನುಮತಿ ನಿರಾಕರಿಸಿದೆ.
ತ್ರಿಷಾ ಬಗ್ಗೆ ಮನ್ಸೂರ್ ಆಡಿದ್ದ ಮಾತು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮನ್ಸೂರ್ ಅಲಿ ಖಾನ್ ವಿರುದ್ಧ ಚೆನ್ನೈನ ಥೌಸಂಡ್ ಲೈಟ್ಸ್ ಆಲ್ ವುಮೆನ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ದೂರು ದಾಖಲಾಗಿತ್ತು.
ಪೊಲೀಸ್ ಠಾಣೆಗೆ ಹಾಜರಾಗಲು ನೊಟೀಸ್ ನೀಡಲಾಗಿತ್ತು. ಆತ ಸಲ್ಲಿಸಿದ್ದ ಜಾಮೀನು ಅರ್ಜಿಯಲ್ಲಿ ದೋಷ ಕಂಡು ಬಂದಿದ್ದರಿಂದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಛೀಮಾರಿ ಹಾಕಿದ್ದರು.