Bengaluru 24°C
Ad

ಜೂ.14ರಂದು ತೆರೆಗೆ ಅಪ್ಪಳಿಸಲು ಸಿದ್ದವಾಗಿದೆ ಧನಂಜಯ್ ಅಭಿನಯದ ‘ಕೋಟಿ’

ನಟ ರಾಕ್ಷಸ ಡಾಲಿ ಧನಂಜಯ್  ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕೋಟಿ’  ಜೂನ್ 14ರಂದು ತೆರೆಗೆ ಅಪ್ಪಳಿಸಲು ಸಿದ್ದವಾಗಿದ್ದು, ಇದೇ ಬುಧವಾರ ‘ಕೋಟಿ’ಯ ಟ್ರೇಲರ್ ಬಿಡುಗಡೆಯಾಗಲಿದೆ.

ನಟ ರಾಕ್ಷಸ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕೋಟಿ’  ಜೂನ್ 14ರಂದು ತೆರೆಗೆ ಅಪ್ಪಳಿಸಲು ಸಿದ್ದವಾಗಿದ್ದು, ಇದೇ ಬುಧವಾರ ‘ಕೋಟಿ’ಯ ಟ್ರೇಲರ್ ಬಿಡುಗಡೆಯಾಗಲಿದೆ.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ.

ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್. ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ.

Ad
Ad
Nk Channel Final 21 09 2023
Ad