News Karnataka Kannada
Sunday, April 28 2024
ಮನರಂಜನೆ

ಧನುಷ್ ಅಭಿನಯದ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದ ಬಿಡುಗಡೆ ದಿನಾಂಕ ಮುಂದೂಡಿಕೆ

Dhanush's 'Captain Miller' date postponed
Photo Credit : Twitter

ಮುಂಬೈ: ನಟ ಧನುಷ್ ಅಭಿನಯದ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ಡಿಸೆಂಬರ್ 15 ರಂದು ಚಿತ್ರ ಬಿಡುಗಡೆಗೆ ಯೋಜಿಸಲಾಗಿತ್ತು. ಇದೀಗ 2024ರ ಸಂಕ್ರಾಂತಿ ವೇಳೆಗೆ ಬಿಡುಗಡೆ ಮಾಡಲು ಚಿತ್ರ ತಂಡ ಯೋಜಿಸಿದೆ.

ಚಿತ್ರದಲ್ಲಿ ಧನುಷ್ ಅವರ ಅಣ್ಣನಾಗಿ ಶಿವರಾಜಕುಮಾರ್ ನಟಿಸುತ್ತಿದ್ದಾರೆ. ಇನ್ನುಳಿದಂತೆ, ಪ್ರಿಯಾಂಕಾ ಮೋಹನ್, ಸಂದೀಪ್ ಕಿಶನ್, ನಿವೇದಿತಾ ಸತೀಶ್, ಜಾನ್ ಕೊಕ್ಕೆನ್ ಮತ್ತು ಡೇನಿಯಲ್ ಬಾಲಾಜಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಸತ್ಯ ಜ್ಯೋತಿ ಫಿಲ್ಮ್ಸ್ ಬೆಂಬಲಿತ ಈ ಚಿತ್ರವು ಆ್ಯಕ್ಷನ್ ಡ್ರಾಮಾ ಆಗಿದ್ದು, ಸ್ವಾತಂತ್ರ್ಯ ಪೂರ್ವದ ಕಥೆಯನ್ನು ಒಳಗೊಂಡಿದ್ದು, ಅರುಣ್ ಮಾಥೇಶ್ವರನ್ ನಿರ್ದೇಶನ ಮಾಡಿದ್ದೂ,ಚಿತ್ರಕ್ಕೆ ಜಿವಿ ಪ್ರಕಾಶ್ ಅವರು ಸಂಗೀತ ಸಂಯೋಜಿಸಿದ್ದು, ಸಿದ್ಧಾರ್ಥ್ ನುನಿ ಅವರ ಛಾಯಾಗ್ರಹಣವಿದೆ. ಚಿತ್ರವನ್ನು ವಿದೇಶದಲ್ಲಿಯೂ ಬಿಡುಗಡೆ ಮಾಡುವ ಗುರಿಯನ್ನು ಹೊಂದಿದೆ.

ಕ್ಯಾಪ್ಟನ್ ಮಿಲ್ಲರ್ ನಂತರ, ಧನುಷ್ ಮತ್ತು ಅರುಣ್ ಮತ್ತೊಂದು ಚಿತ್ರಕ್ಕಾಗಿ ಮತ್ತೆ ಒಂದಾಗುತ್ತಿದ್ದಾರೆ. ಈ ಚಿತ್ರಕ್ಕೆ ವಂಡರ್‌ಬಾರ್ ಫಿಲ್ಮ್ಸ್ ಬೆಂಬಲ ನೀಡಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು