ಬೆಂಗಳೂರು: ಸ್ಯಾಂಡಲ್‌ವುಡ್ ಯುವ ನಟ, ರಾಘವೇಂದ್ರ ರಾಜ್‌ಕುಮಾರ್ ಅವರ ಎರಡನೇ ಪುತ್ರ ಯುವ ರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ದೊಡ್ಮನೆ ಮಗ ಯುವ ರಾಜ್‌ಕುಮಾರ್ ಡಿವೋರ್ಸ್‌ಗೆ ಮುಂದಾಗಿದ್ದು, ಪತ್ನಿ ಶ್ರೀದೇವಿ ಭೈರಪ್ಪ ಅವರಿಂದ ದೂರವಾಗಲು ನಿರ್ಧರಿಸಿದ್ದಾರೆ.
ಸ್ಯಾಂಡಲ್ವುಡ್ನ ದೊಡ್ಮನೆಯಲ್ಲಿ ಬೆಳಕಿಗೆ ಬಂದಿರೋ ಮೊದಲ ಡಿವೋರ್ಸ್ ಕೇಸ್ ಇದಾಗಿದೆ. ಕಳೆದ 4 ದಿನಗಳ ಹಿಂದೆಯೇ ಯುವ ರಾಜ್‌ಕುಮಾರ್ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
ಜೂನ್ 6ನೇ ತಾರೀಕು ಎಂಸಿ ಌಕ್ಟ್ ಸೆಕ್ಷನ್ 13(1)(ia) ಅಡಿಯಲ್ಲಿ ಯುವ ರಾಜ್‌ಕುಮಾರ್ ಅವರು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಪತ್ನಿ ಶ್ರೀದೇವಿ ಭೈರಪ್ಪ ಅವರಿಂದ ಯುವ ರಾಜ್‌ಕುಮಾರ್ ಅವರು ಡಿವೋರ್ಸ್ ಕೇಳಿದ್ದಾರೆ. ಈ ಅರ್ಜಿ ಪುರಸ್ಕರಿಸಿರುವ ಕೋರ್ಟ್ ಜುಲೈ ತಿಂಗಳ 4ನೇ ತಾರೀಕಿಗೆ ವಿಚಾರಣೆಯನ್ನು ನಿಗದಿ ಮಾಡಿದೆ. ಯುವರಾಜ್‌ಕುಮಾರ್ ಅವರು ತಮ್ಮ ವಿಚ್ಛೇದನದ ಅರ್ಜಿಯಲ್ಲಿ ಪತ್ನಿಯ ವಿರುದ್ಧ ಕ್ರೌರ್ಯ ಹಾಗೂ ಅಗೌರವದಿಂದ ನೋಡಿಕೊಂಡ ಆರೋಪ ಮಾಡಿದ್ದಾರೆ. ಪತ್ನಿಯಿಂದ ಮಾನಸಿಕ ಟಾರ್ಚರ್ ಆರೋಪ ಮಾಡಿ ಯುವ ರಾಜ್‌ಕುಮಾರ್ ಅವರು ಕೇಸ್ ದಾಖಲಿಸಿದ್ದಾರೆ.

