Bengaluru 21°C
Ad

ಡ್ರಗ್ಸ್‌ ಕೇಸ್‌ : ನಟಿ ಸಂಜನಾ ಗಲ್ರಾನಿ, ಶಿವ ಪ್ರಕಾಶ್ ಚಿಪ್ಪಿಗೆ ಕೊನೆಗೂ ಸಿಕ್ತು ರಿಲೀಫ್‌

ಕಳೆದ ವರ್ಷ ಸ್ಯಾಂಡಲ್‌ವುಡ್​ನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಕೊನೆಗೂ ಬಿಗ್ ರಿಲೀಫ್ ಸಿಕ್ಕಿದೆ.ಇಬ್ಬರ ವಿರುದ್ದ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಸದ್ಯ ಇಬ್ಬರು ನಿಟ್ಟುಸಿರು ಬಿಟ್ಟಿದ್ದಾರೆ.

300x250 2

ಮಾದಕ ವಸ್ತು ಜಾಲದ ಜತೆ ನಂಟು ಹೊಂದಿದ್ದಾರೆ ಎಂಬ ಆರೋಪದಲ್ಲಿ 2020ರ ಸೆಪ್ಟೆಂಬರ್‌ನಲ್ಲಿ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ನಿರ್ಮಾಪಕ ಶಿವಪ್ರಕಾಶ್ ಚಿಪ್ಪಿ ಸೇರಿ ಹಲವರ ಬಂಧನವಾಗಿತ್ತು. ನಂತರ ಜೈಲು ಸೇರಿದ್ದ ಸಂಜನಾಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಡಿಸೆಂಬರ್‌ನಲ್ಲಿ ಜಾಮೀನು ಸಿಕ್ಕಿತ್ತು. ಬಳಿಕ ಎಫ್‌ಐಆರ್ ರದ್ದು ಕೋರಿ ಸಂಜನಾ ಹಾಗೂ ಶಿವಪ್ರಕಾಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆ ಅರ್ಜಿಯನ್ನು ಇಂದು (ಜೂನ್ 24) ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಏಕಸದಸ್ಯ ಪೀಠ ಎಫ್‌ಐಆರ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.

Ad
Ad
Nk Channel Final 21 09 2023
Ad