ʻಪಠಾಣ್ʼ ಸಿನಿಮಾ ಬಳಿಕ ಶಾರುಖ್ ಖಾನ್ ಅವರ ʻಜವಾನ್ʼ ಹಾಗೂ ಡಂಕಿ ಸಿನಿಮಾಗಾಗಿ ಅವರ ಫ್ಯಾನ್ಸ್ ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ಇದೀಗ ಡಂಕಿ ಸಿನಿಮಾ ಬಿಡುಗಡೆಗೆ ಮುಂಚೆಯೇ ಇತಿಹಾಸವನ್ನು ಸೃಷ್ಟಿಸಿದೆ ಎಂದು ವರದಿಯಾಗಿದೆ.’ ಬಾಲಿವುಡ್ ಹಂಗಾಮಾ’ ವರದಿ ಮಾಡಿರುವ ಪ್ರಕಾರ ಶೂಟಿಂಗ್ ಮುಗಿಯುವುದಕ್ಕೂ ಮುನ್ನವೇ ‘ಡಂಕಿ’ ಚಿತ್ರದ ಒಟಿಟಿ ಹಕ್ಕುಗಳು ಸೇಲ್ ಆಗಿವೆ.
ಅದು ಕೂಡ ಬರೋಬ್ಬರಿ 155 ಕೋಟಿ ರೂ. ಎಂದು ಹೇಳಲಾಗುತ್ತಿದೆ. ಮನರಂಜನಾ ಪೋರ್ಟಲ್ ಬಾಲಿವುಡ್ ಹಂಗಾಮಾ ವರದಿ ಮಾಡಿದಂತೆ, ಶಾರುಖ್ ಖಾನ್ ಮತ್ತು ರಾಜ್ಕುಮಾರ್ ಹಿರಾನಿ ಅವರ ಮುಂಬರುವ ಚಿತ್ರ ಡಂಕಿ ಸಿನಿಮಾ ಡಿಜಿಟಲ್ ಹಕ್ಕುಗಳನ್ನು ಜಿಯೋ ಸಿನಿಮಾಗೆ 155 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ ಎಂದು ವರದಿ ಮಾಡಿದೆ. ಈ ವರ್ಷ ಡಿಸೆಂಬರ್ 22ರಂದು ಚಿತ್ರಮಂದಿರಗಳಲ್ಲಿ ‘ಡಂಕಿ’ ಸಿನಿಮಾ ಬಿಡುಗಡೆ ಆಗಲಿದೆ.