ಬೆಂಗಳೂರು:   ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟ ದರ್ಶನ್‌ ಅಲ್ಲಿನ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪ ಕೇಳಿ ಬಂದಿದೆ. ಜೈಲಿನಲ್ಲಿದ್ದರು ಎಲ್ಲಾ ರೀತಿಯ  ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್​​ಐಆರ್ ದಾಖಲಾಗಿದೆ. ಈ ಮೂರೂ ಎಫ್​ಐಆರ್​ಗಳಲ್ಲಿ ದರ್ಶನ್‌   ಹೆಸರು ಪ್ರಸ್ತಾಪ ಆಗಿದೆ. ಇದರಿಂದ ನಟನಿಗೆ ಸಂಕಷ್ಟ ಹೆಚ್ಚಾಗಿದೆ.

ಜೈಲಿನಲ್ಲಿ ದುಡ್ಡು ಇರುವ ವ್ಯಕ್ತಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದನ್ನು ಸಾಕ್ಷಿ ಎಂಬಂತೆ ದರ್ಶನ್​ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್​ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್​​ಐಆರ್​ ಆಗಿದೆ.