ಬಾಲಿವುಡ್ ನಿರ್ದೇಶಕಿ ಕಮ್ ನಿರ್ಮಾಪಕಿ ಎಕ್ತಾ ಕಪೂರ್ ಇದೀಗ ಮಂಗಳೂರಿನ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬದ ಜೊತೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಎಕ್ತಾ ಕಪೂರ್, ಈಗ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೆಲ ಸಮಯ ದೇವಸ್ಥಾನದಲ್ಲಿ ಕುಟುಂಬದ ಜೊತೆ ಸಮಯ ಕಳೆದಿದ್ದಾರೆ. ಬಳಿಕ ದೇವಸ್ಥಾನದ ವತಿಯಿಂದ ದೇವರ ವಿಶೇಷ ವಸ್ತ್ರ ನೀಡಿ ಗೌರವಿದ್ದಾರೆ. ನಂತರ ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಎಕ್ತಾ ಕಪೂರ್ ಕುಟುಂಬ ಭೇಟಿ ಕೊಟ್ಟಿದ್ದಾರೆ.