ಯೂಟ್ಯೂಬ್​ ಮೇಲೆ ಬಿತ್ತು ಎಲಾನ್​ ಮಸ್ಕ್​​ ಕಣ್ಣು

ಟೆಸ್ಲಾ ಒಡೆತನದ ಎಲಾನ್​ ಮಸ್ಕ್​ ಯೂಟ್ಯೂಬ್​ಗೆ ಟಕ್ಕರ್​ ಕೊಡಲು ತಯಾರಿ ನಡೆಸಿದೆ. ಅದಕ್ಕಾಗಿ ಎಕ್ಸ್​ ಟಿವಿ ಆ್ಯಪ್​ ಅನ್ನು ಪ್ರಾರಂಭಿಸಲು ಮುಂದಾಗಿದೆ. ಶೀಘ್ರದಲ್ಲೇ ನೂತನ ಆ್ಯಪ್​ ಅನ್ನು ಸಿದ್ಧಪಡಿಸಿ ಬಿಡುಗಡೆ ಮಾಡಲಿದೆ.

ಅಮೆರಿಕಾದ ಮಾಧ್ಯಮ ಕಾರ್ಯನಿರ್ವಾಹಕಿ ಮತ್ತು ಸಿಇಒ ಲಿಂಡಾ ಯಾಕರಿನೋ ಈ ಬಗ್ಗೆ ಮೈಕ್ರೋ ಬ್ಲಾಗಿಂಗ್​ ಸೈಟ್​​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಶೀಘ್ರದಲ್ಲೇ ವಿಡಿಯೋ ಸ್ಟ್ರೀಮಿಂಗ್​ ಆ್ಯಪ್​ ಅನ್ನು ಪ್ರಾರಂಭಿಸಲಾಗುವುದು ಎಂದು ಖಚಿತಪಡಿಸಿದ್ದಾರೆ.
‘‘ಶೀಘ್ರದಲ್ಲೇ ನಾವು ಎಕ್ಸ್​ ಟಿವಿ ಅಪ್ಲಿಕೇಶನ್​​ನೊಂದಿಗೆ ನಿಮ್ಮ ಸ್ಮಾರ್ಟ್​ಟಿವಿಗಳಿಗೆ ನೈಜ ವಿಷಯಗಳನ್ನು ತರುತ್ತೇವೆ. ದೊಡ್ಡ ಪರದೆಯ ಮೇಲೆ ಉತ್ತಮ ಗುಣಮಟ್ಟದ, ಮನರಂಜನೆಯನ್ನು ನೀಡಲಿದೆ’’ ಎಂದು ಬರೆದುಕೊಂಡಿದ್ದಾರೆ.

ಅಂದಹಾಗೆಯೇ ನೂತನ ಆ್ಯಪ್​ ನೆಚ್ಚಿನ ವಿಡಿಯೋಗಳನ್ನು ಸ್ಮಾರ್ಟ್​ಫೋನ್​ನಿಂದ ಟಿವಿ ಪರದೆಗೆ ಎಕ್ಸ್​ ಮುಖಾಂತರ ಬಿತ್ತರಿಸಲು ಸಾಧ್ಯವಾಗುತ್ತದೆ ಎಂದು ಯಾಕರಿನೊ ತಿಳಿಸಿದ್ದಾರೆ. ನೂತನ ಆ್ಯಪ್​​ ಶೀಘ್ರದಲ್ಲೇ ಹೆಚ್ಚಿನ ಸ್ಮಾರ್ಟ್​ ಟಿಬಿಗಳಲ್ಲಿ ಲಭ್ಯವಿರಲಿದೆ ಎಂದಿದ್ದಾರೆ.

Ashitha S

Recent Posts

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

5 mins ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

26 mins ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

60 mins ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

1 hour ago

ಜೆಪಿ ನಡ್ಡಾ, ಬಿವೈ ವಿಜಯೇಂದ್ರಗೆ ಸಮನ್ಸ್‌ ಜಾರಿ ಮಾಡಿದ ಬೆಂಗಳೂರು ಪೊಲೀಸ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರಿಗೆ…

1 hour ago

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

2 hours ago