News Karnataka Kannada
Monday, May 13 2024
ಮನರಂಜನೆ

ಪ್ರತಿಷ್ಠಿತ ಎಮ್ಮಿ ಪ್ರಶಸ್ತಿ ಗೆದ್ದ ಭಾರತೀಯ ವೀರ್ ದಾಸ್

Emmy Award
Photo Credit : Twitter

ದೆಹಲಿ: ಅತ್ಯುತ್ತಮ ಸಿನಿಮಾಗಳಿಗೆ ನೀಡಲಾಗುವ ಸರ್ವೋತ್ತಮ ಪ್ರಶಸ್ತಿ ಎಂದು ಆಸ್ಕರ್ ಅನ್ನು ಗುರುತಿಸಲಾಗುತ್ತದೆ. ಹಾಗೆಯೇ ಟಿವಿ ಶೋಗಳಿಗೆ ನೀಡಲಾಗುವ ವಿಶ್ವದ ಸರ್ವೋತ್ತಮ ಪ್ರಶಸ್ತಿಯೆಂದು ಎಮ್ಮಿ ಪ್ರಶಸ್ತಿಯನ್ನು (Emmy Award) ಕರೆಯಲಾಗುತ್ತದೆ. ಬೆರಳೆಣಿಕೆಯ ಭಾರತೀಯರಷ್ಟೆ ಈ ಪ್ರಶಸ್ತಿ ಗೆದ್ದಿದ್ದಾರೆ. ಇದೀಗ ಆ ಪಟ್ಟಿಗೆ ಭಾರತದ ಜನಪ್ರಿಯ ಕಮಿಡಿಯನ್ ವೀರ್ ದಾಸ್ ಹೊಸ ಸೇರ್ಪಡೆಯಾಗಿದ್ದಾರೆ.

ನೆಟ್​ಫ್ಲಿಕ್ಸ್​ನಲ್ಲಿ ಸ್ಟ್ರೀಮ್ ಆಗುತ್ತಿರುವ ವೀರ್ ದಾಸ್​ರ ಕಾಮಿಡಿ ಸ್ಪೆಷಲ್ ‘ವೀರ್ ದಾಸ್; ಲ್ಯಾಂಡಿಂಗ್’ ಎಮ್ಮಿಯ ಯೂನಿಕ್ ಕಾಮಿಡಿ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ. ಈ ಪ್ರಶಸ್ತಿಯನ್ನು ‘ಡೆರ್ರಿ ಗರ್ಲ್ಸ್​-ಸೀಸನ್ 3’ ಜೊತೆಗೆ ಹಂಚಿಕೊಳ್ಳಲಾಗಿದೆ. ‘ವೀರ್ ದಾಸ್; ಲ್ಯಾಂಡಿಂಗ್’ ಹಾಗೂ ‘ಡೆರ್ರಿ ಗರ್ಲ್ಸ್​-ಸೀಸನ್ 3’ ಎರಡೂ ಶೋಗಳಿಗೆ ಜಂಟಿಯಾಗಿ ಪ್ರಶಸ್ತಿಯನ್ನು ನೀಡಲಾಗಿದೆ.

ಇದು ಅವರ ಸುಪ್ರಸಿದ್ಧ ವೃತ್ತಿಜೀವನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸಿದೆ. ವೀರ್ ದಾಸ್ ಭಾರತದ ಜನಪ್ರಿಯ ಕಮಿಡಿಯನ್. ಅವರು ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ತುಂಬಿದ ಗೃಹಗಳ ಕಾಮಿಡಿ ಶೋಗಳನ್ನು ನೀಡಿದ್ದಾರೆ. ಅವರ ಕೆಲವು ಶೋಗಳು ವಿವಾದಕ್ಕೆ ಕಾರಣವಾಗಿದ್ದೂ ಸಹ ಇದೆ. ಇನ್ನು ವೀರ್ ದಾಸ್ ಮಾತ್ರವೇ ಅಲ್ಲದೆ ಭಾರತೀಯ ಟಿವಿ ಜಗತ್ತಿನ ರಾಣಿ ಎಂದೇ ಕರೆಯಲಾಗುವ ಏಕ್ತಾ ಕಪೂರ್​ಗೂ ಪ್ರಶಸ್ತಿ ಲಭಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು