ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ (ಸೆಪ್ಟೆಂಬರ್ 9) ಕೊನೆ ಆಗುವುದರಲ್ಲಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ಅದೇ ರೀತಿ ಈ ಪ್ರಕರಣದಲ್ಲಿ ಬೇರೆ ಬೇರೆ ಜೈಲು ಸೇರಿರುವ ಎಲ್ಲರೂ ವಿಚಾರಣೆ ಎದುರಿಸಿದರು. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12ರಂದು ಇವರು ಮತ್ತೆ ಕೋರ್ಟ್ ಎದುರು ಹಾಜರಾಗಬೇಕಾಗಿದೆ.
Ad