ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ನಿಧನ ಹೊಂದಿದ್ದಾರೆ ಎನ್ನುವ ಸುಳ್ಳು ಸುದ್ದಿ ವೈರಲ್ ಆಗುತ್ತಿದೆ. ಈ ಬಗ್ಗೆ ದೊಡ್ಡಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಆರೋಗ್ಯದಿಂದ ಇದ್ದೇನೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಸುದ್ದಿ ಸುಳ್ಳಿನಿಂದ ಕೂಡಿದೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆ ಇರುವವರೆಗೂ ನಾನು ಆರೋಗ್ಯವಾಗಿಯೇ ಇರುತ್ತೇನೆ’ ಎಂದಿದ್ದಾರೆ.

ಇನ್ನೊಂದೆಡೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಆಕ್ರೋಶವೂ ವ್ಯಕ್ತವಾಗುತ್ತಿದೆ. ಎಐ ನಿರ್ಮಿತ ಪೋಸ್ಟರ್ ಶುಕ್ರವಾರ ಬೆಳಗ್ಗಿನಿಂದಲೂ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದ್ದು ಅನೇಕರನ್ನು ಗೊಂದಲಕ್ಕೀಡು ಮಾಡಿದೆ.

View this post on Instagram

A post shared by News Karnataka (@newskarnataka)