ಬೆಂಗಳೂರು : ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಜಗ್ಗೇಶ್ ಅವರು ನಿರ್ಮಾಪಕ ಎಂ. ಎನ್ ಕುಮಾರ್ ವಿರುದ್ಧ ದೂರು ದಾಖಲಿಸಿದ್ದರು ಎನ್ನಲಾಗಿದ್ದು, ಈ ಸಂಬಂಧ ಉಪ್ಪಾರಪೇಟೆ ಪೊಲೀಸರು ನಿರ್ಮಾಪಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
ಎಂ ಎನ್ ಕುಮಾರ್ ಅವರು ಬರೋಬ್ಬರಿ 1.25 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಸದ್ಯ ಬಂಧನದ ಭೀತಿಯನ್ನು ಎದುರಿಸುತ್ತಿದ್ದಾರೆ. ಇನ್ನು ಎಂ.ಎನ್. ಕುಮಾರ್ ಅವರು ಅಂಜನಿ ಪುತ್ರ, ಮುಕುಂದ ಮುರಾರಿ, ಮಾಣಿಕ್ಯ, ಐಶ್ವರ್ಯಾ, ಕಾಶಿ ಪ್ರಮ್ ವಿಲೇಜ್ ಸೇರಿದಂತೆ ಹಲವಾರು ಸಿನೆಮಾಗಳನ್ನು ನಿರ್ಮಾಣ ಮಾಡಿದ್ದಾರೆ.
ಈ ಹಿಂದೆ ನಟ ಸುದೀಪ್ ಅವರಿಗೂ ಕೂಡ ವಂಚನೆ ಮಾಡಿದ್ದರು ಎಂದು ಆರೋಪ ಕೇಳಿ ಬಂದಿತ್ತು. ಇದೀಗ ಮತ್ತೆ ವಚನೆ ಆರೋಪದ ಮೇಲೆ ಪೊಲೀಸರು ಎಂ ಎನ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

