ಬೆಂಗಳೂರು: ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ ಪಿ ಸುಶೀಲಾ (86) ಅವರು ಹೊಟ್ಟೆ ನೋವಿನಿಂದ ನಿನ್ನೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ವೈದ್ಯರು ಗಾಯಕಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ವರದಿಗಳ ಪ್ರಕಾರ, ನಿನ್ನೆ ಹೊಟ್ಟೆ ನೋವಿನಿಂದ ಪಿ ಸುಶೀಲಾ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಧುರ ಕಂಠದ ಗಾಯಕಿ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಆಕೆ ಬೇಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಬೇಕೆಂದು ಚಿತ್ರರಂಗ ಮತ್ತು ಅಭಿಮಾನಿಗಳು ಬಯಸುತ್ತಿದ್ದಾರೆ.
ಗಾಯನಕ್ಕಾಗಿ 5 ರಾಷ್ಟ್ರಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಗೌರವಗಳನ್ನು ಪಿ. ಸುಶೀಲ ಪಡೆದಿದ್ದಾರೆ. ವಿವಿಧ ಭಾಚೆಗಳಲ್ಲಿ ಹಾಡುಗಳನ್ನು ಹಾಡಿ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್, ಏಷಿಯನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.