Bengaluru 26°C

ಮ್ಯಾಕ್ಸ್ ಚಿತ್ರ ಯಶಸ್ವಿಗೆ ಅಭಿಮಾನಿಗಳಿಂದ ಪ್ರಾರ್ಥನೆ

ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿ ಬಳಗದ ವತಿಯಿಂದ ಕಲೈ ಪುಲಿ . ಎಸ್ ತನು ವಿ ಕ್ರಿಯೇಶನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ ,

ಮೈಸೂರು: ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿ ಬಳಗದ ವತಿಯಿಂದ ಕಲೈ ಪುಲಿ . ಎಸ್ ತನು ವಿ ಕ್ರಿಯೇಶನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ , ವಿಜಯ್ ಕಾರ್ತಿಕೇಯ ಅವರ ನಿರ್ದೇಶನದ ಹಾಗೂ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ ಮ್ಯಾಕ್ಸ್ ಡಿಸೆಂಬರ್ 25ರಂದು ಕನ್ನಡ ಸೇರಿದಂತೆ  5 ಭಾಷೆಗಳಲ್ಲಿ ದೇಶಾದ್ಯಂತ ಅದ್ದೂರಿಯಾಗಿ ಬಿಡುಗಡೆಗೊಳ್ಳಲಿದ್ದು,


ಚಿತ್ರ ಯಶಸ್ವಿಯಾಗಲಿ ಎಂದು ಅಭಿಮಾನಿಗಳು ಚಿತ್ರದ ತಂಡದವರ ಹೆಸರಿನಲ್ಲಿ ಹಾಗೂ ವಿಶೇಷವಾಗಿ ಅಭಿನವ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರಿನಲ್ಲಿ ನಗರದ 101 ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.


ಇದೇ ಸಂದರ್ಭದಲ್ಲಿ ಕಿಚ್ಚ ಸುದೀಪ್ ಅಭಿಮಾನಿ ಬಳಗದ ಕಿಚ್ಚ ಸುದೀಪ್ ಅಭಿಮಾನಿ ಬಳಗದ ಅಧ್ಯಕ್ಷರಾದ ಆಲನಹಳ್ಳಿ ಎಂ ಎನ್ ಚೇತನ್ ಗೌಡ ನಂದೀಶ್ ನಾಯಕ್, ಮೈಸೂರ್ ನಾರಾಯಣ ಜಿ, ಮದಕರಿ ಮಹದೇವ್, ಮಹಾನ್ ಶ್ರೇಯಸ್, ಲೋಕೇಶ್, ಹಾಗೂ ಇನ್ನಿತರರು ಹಾಜರಿದ್ದು ಸಿನಿಮಾ ಯಶಸ್ವಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ, ಜೈಕಾರ ಮೊಳಗಿಸಿದರು.


 

Nk Channel Final 21 09 2023