ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಸೂಪರ್ ಹಿಟ್ ಸಿನಿಮಾ ಫೈಟರ್ ಒಟಿಟಿಗೆ ಬಂದಿದೆ. ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿದ್ದ ಈ ಚಿತ್ರವು ಹಲವು ವಿವಾದಕ್ಕೂ ಕಾರಣವಾಗಿತ್ತು.
ಫೈಟರ್ ಸಿನಿಮಾ ಕುರಿತಂತೆ ಬಿಡುಗಡೆ ದಿನದಿಂದ ಈವರೆಗೂ ಒಂದಿಲ್ಲೊಂದು ಸಂಕಷ್ಟವನ್ನು ಎದುರಿಸುತ್ತಲೇ ಬಂದಿದೆ. ಈ ಹಿಂದೆ ಸೆನ್ಸಾರ್ ಮಂಡಳಿಯು ಚಿತ್ರದ ಎರಡು ದೃಶ್ಯಗಳನ್ನು ಕತ್ತರಿಸುವಂತೆ ಸೂಚಿಸಲಾಗಿತ್ತು. ಅದರಲ್ಲೂ ದೀಪಿಕಾ ಪಡುಕೋಣೆ ಬಿಕಿನಿ ಹಾಕಿದ ದೃಶ್ಯಕ್ಕೆ ಕತ್ತರಿ ಹಾಕಲಾಗಿತ್ತು.
ವಾಯುಸೇನೆ ಸಮವಸ್ತ್ರ ಧರಿಸಿಕೊಂಡು ಹೃತಿಕ್ ಮತ್ತು ದೀಪಿಕಾ ಚುಂಬಿಸುವ ದೃಶ್ಯವು ವಸ್ತ್ರ ಸಂಹಿತೆ ನೀತಿಯನ್ನು ಉಲ್ಲಂಘಿಸಿದೆ. ಇದರಿಂದಾಗಿ ವಾಯುಸೇನೆಗೆ ಮುಜುಗರ ತರಿಸಿದೆ ಎಂದು ಅಸ್ಸಾಮಿನ ವಾಯುಸೇನಾ ಅಧಿಕಾರಿ ಸೌಮ್ಯ ದೀಪ್ ದಾಸ್ ಎನ್ನುವವರು ದೂರು ದಾಖಲಿಸಿದ್ದಾರೆ.