ಬೆಂಗಳೂರು: ಫಿಲ್ಮ್‌ಫೇರ್ ದಕ್ಷಿಣ 2024 ಪ್ರಶಸ್ತಿ ಆಗಸ್ಟ್ 03ರದು ಬೆಂಗಳೂರಿನಲ್ಲಿಯೇ ಅದ್ಧೂರಿಯಾಗಿ ನಡೆದಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳ ಅತ್ಯುತ್ತಮ ಸಿನಿಮಾಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಗಿದೆ. ಮಮ್ಮುಟಿ, ವಿಕ್ರಂ, ಬ್ರಹ್ಮಾನಂದಂ, ಸಿದ್ಧಾರ್ಥ್, ನಟಿ ಕೀರ್ತಿ ಸುರೇಶ್ ಇನ್ನೂ ಹಲವಾರು ಮಂದಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿದ್ದರು. 2024ರ ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್ 2024ಕ್ಕೆ ಹಲವು ಸಿನಿಮಾಗಳು ಮತ್ತು ಕಲಾವಿದರನ್ನು ನಾಮನಿರ್ದೇಶನಗೊಳಿಸಲಾಗಿತ್ತು. ಈ ಕುರಿತ ಸಂಪೂರ್ಣ ಪಟ್ಟಿ ಇಲ್ಲಿದೆ.
ಅತ್ಯುತ್ತಮ ಸಿನಿಮಾ: ಡೇರ್ಡೆವಿಲ್ ಮುಸ್ತಫಾ
ಅತ್ಯುತ್ತಮ ನಟ: ರಕ್ಷಿತ್ ಶೆಟ್ಟಿ (ಸಪ್ತ ಸಾಗರದಾಚೆ ಎಲ್ಲೋ)
ಅತ್ಯುತ್ತಮ ನಟಿ: ಸಿರಿ ರವಿಕುಮಾರ್ (ಸ್ವಾತಿ ಮುತ್ತಿನ ಮಳೆ ಹನಿಯೇ)
ಅತ್ಯುತ್ತಮ ನಿರ್ದೇಶಕ: ಹೇಮಂತ್ ರಾವ್ (ಸಪ್ತ ಸಾಗರದಾಚೆ ಎಲ್ಲೊ)
ಅತ್ಯುತ್ತಮ ಸಿನಿಮಾ ವಿಮರ್ಶಕರ ಆಯ್ಕೆ: ಪಿಂಕಿ ಎಲ್ಲಿ?
ಅತ್ಯುತ್ತಮ ನಟ ವಿಮರ್ಶಕರ ಆಯ್ಕೆ: ಮೈಸೂರು ಪೂರ್ಣ (ಆರ್ಕೆಸ್ಟ್ರಾ ಮೈಸೂರು)
ಅತ್ಯುತ್ತಮ ನಟಿ ವಿಮರ್ಶಕರ ಆಯ್ಕೆ: ರುಕ್ಮಿಣಿ ವಸಂತ್ (ಸಪ್ತ ಸಾಗರದಾಚೆ ಎಲ್ಲೊ)
ಅತ್ಯುತ್ತಮ ಪೋಷಕ ನಟ: ರಂಗಾಯಣ ರಘು (ಟಗರು ಪಲ್ಯ)
ಅತ್ಯುತ್ತಮ ಪೋಷಕ ನಟಿ: ಸುಧಾ ಬೆಳವಾಡಿ (ಕೌಸಲ್ಯ ಸುಪ್ರಜಾ ರಾಮ)
ಅತ್ಯುತ್ತಮ ಹೊಸ ನಟ: ಶಿಶಿರ್ ಬೈಕಾಡಿ (ಡೇರ್ಡೆವಿಲ್ ಮುಸ್ತಫ)
ಅತ್ಯುತ್ತಮ ಹೊಸ ನಟಿ: ಅಮೃತಾ ಪ್ರೇಮ್ (ಟಗರು ಪಲ್ಯ)
ಅತ್ಯುತ್ತಮ ಹಾಡುಗಳು: ಚರಣ್ ರಾಜ್ (ಸಪ್ತ ಸಾಗರದಾಚೆ ಎಲ್ಲೊ)
ಅತ್ಯುತ್ತಮ ಸಾಹಿತ್ಯ: ಬಿಆರ್ ಲಕ್ಷ್ಮಣರಾವ್ (ಯಾವ ಚುಂಬಕ, ಚೌಕಬಾರ)
ಅತ್ಯುತ್ತಮ ಗಾಯಕ: ಕಪಿಲ್ ಕಪಿಲನ್ (ನದಿಯೇ: ಸಪ್ತ ಸಾಗರದಾಚೆ ಎಲ್ಲೊ)
ಅತ್ಯುತ್ತಮ ಗಾಯಕಿ: ಶ್ರೀಲಕ್ಷ್ಮಿ ಬೆಲಮಣ್ಣು (ಕಡಲನು ಕಾಣ ಹೊರಟ: ಸಪ್ತ ಸಾಗರದಾಚೆ ಎಲ್ಲೊ)
ಜೀವಮಾನ ಸಾಧನೆ: ಹಿರಿಯ ನಟ ಶ್ರೀನಾತ್.