ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಇಂದು ಬಾರಿ ‘ಕಿರಿಕ್ ಪಾರ್ಟಿ’ ಸಿನಿಮಾ ‘ಕಾಪಿರೈಟ್’ ವಿಚಾರವಾಗಿ ವಿವಾದಕ್ಕೂ ಗ್ರಾಸವಾಗಿತ್ತು. ಇದೀಗ ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿನ ʻಗಾಳಿಮಾತುʼ ಹಾಗೂ ʻನ್ಯಾಯ ಎಲ್ಲಿದೆʼ ಎಂಬ ಹಾಡನ್ನು ಕದ್ದಿರುವ ಆರೋಪ ಕೇಳಿ ಬಂದಿದೆ. ಮಾತ್ರವಲ್ಲ ನಟ ರಕ್ಷಿತ್ ಶೆಟ್ಟಿ ಮೇಲೆ ಏಫ್‌ಐಆರ್ ದಾಖಲಾಗಿದೆ.
ನ್ಯಾಯ ಎಲ್ಲಿದೆʼ ಟೈಟಲ್ ಸಾಂಗ್ ಹಾಗೂ ‘ಒಮ್ಮೆ ನಿನ್ನನ್ನೂ ಕಣ್ತುಂತ ನೋಡುವಾಸೆ” ಹಾಡುಗಳನ್ನು ಕದ್ದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಚಿತ್ರದಲ್ಲಿ ಎರಡೂ ಹಾಡುಗಳನ್ನ ಅನುಮತಿ ಇಲ್ಲದೆ ಬಳಕೆ ಮಾಡಿದ್ದಾರೆಂದು ನವೀನ್‌ರಿಂದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಂದು ಕಿರಿಕ್ ಪಾರ್ಟಿ ಇಂದು ಬ್ಯಾಚುಲರ್ ಪಾರ್ಟಿ ವಿವಾದ ಶುರು ಆಗಿದೆ.

