News Karnataka Kannada
Sunday, April 28 2024
ಮಲಯಾಳಂ

ಟೋವಿನೋ ಥಾಮಸ್  ನಟನೆಯ ‘ಎಆರ್‌ಎಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್

ಟೋವಿನೋ ಥಾಮಸ್  ನಟನೆಯ ‘ಎಆರ್‌ಎಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.
Photo Credit : News Kannada

ಬೆಂಗಳೂರು: ಟೋವಿನೋ ಥಾಮಸ್  ನಟನೆಯ ‘ಎಆರ್‌ಎಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

ಜಿತಿಲ್ ಲಾಲ್ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿರುವ ಈ ಚಿತ್ರ  ಮ್ಯಾಜಿಕ್ ಫ್ರೇಮ್ಸ್ ಮತ್ತು ಯುಜಿಎಂ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ಸುಜಿತ್ ನಂಬಿಯಾರ್ ಚಿತ್ರಕಥೆಯನ್ನು ಬರೆದಿದ್ದಾರೆ ಮತ್ತು ದಿಬು ನೈನನ್ ಥಾಮಸ್ ಈ ಅದ್ಭುತ ಸಂಗೀತ ನೀಡಲಿದ್ದಾರೆ. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿ ದೊಡ್ಡ ಬಜೆಟ್ ಸಿನಿಮಾ ಇದಾಗಿದೆ.

‘ಎಆರ್‌ಎಂ’ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಈ ಚಿತ್ರ 3 ಯುಗಗಳ ಕಥೆ ಹೇಳುತ್ತದೆ. ಮಲಯಾಳಂ, ಹಿಂದಿ, ಇಂಗ್ಲಿಷ್, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ 6 ಭಾಷೆಗಳಲ್ಲಿ ತಯಾರಾಗಲಿದೆ.‌ ಸಂಪೂರ್ಣ 3ಡಿಯಲ್ಲಿ ‘ಎಆರ್‌ಎಂ’ ಚಿತ್ರ ತಯಾರಾಗಲಿದ್ದು,  ‘ಎಆರ್‌ಎಂ’ ಸಿನಿಮಾ ಟೋವಿನೋ ಥಾಮಸ್ ಅವರು ಮಣಿಯನ್, ಅಜಯನ್ ಮತ್ತು ಕುಂಜಿಕೇಲು ಎಂಬ 3 ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್  ಮತ್ತು ಸುರಭಿ  ನಾಯಕಿಯರಾಗಿ ನಟಿಸುತ್ತಿದ್ದು, ಪ್ರಮುಖ ನಟರಾದ ಬಾಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಪ್ರಮೋದ್ ಶೆಟ್ಟಿ ಮತ್ತು ರೋಹಿಣಿ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು