ಬೆಂಗಳೂರು: ಶಿವಣ್ಣ ನಟನೆಯ ಭೈರವನ ಕೊನೆ ಪಾಠ ಚಿತ್ರದ ಫಸ್ಟ್ ಲುಕ್ ಬಿಡುಗಡೆಗೊಂಡಿದ್ದು, ಇದರಲ್ಲಿ ಶಿವಣ್ಣ ಒಂದು ನೂತನ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸ್ಯಾಂಡಲ್ ವುಡ್‌ನಲ್ಲಿ ʼಕವಲುದಾರಿʼ, “ಗೋಧಿ ಬಣ್ಣ ಸಾಧಾರಣ ಮೈಕಟ್ಟು’, “ಸಪ್ತಸಾಗರದಾಚೆ ಎಲ್ಲೋ(ಸೈಡ್ ಎ,ಬಿ) ಚಿತ್ರಗಳನ್ನು ಭರವಸೆಯ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಹೇಮಂತ್ ರಾವ್ ಮಾಸ್ ಹೀರೋ ಶಿವಣ್ಣ ಅವರಿಗೆ ಆ್ಯಕ್ಷನ್ ಕಟ್ ಹೇಳುತ್ತಿರುವುದರಿಂದ ಈ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಇತ್ತೀಚೆಗಷ್ಟೇ ಸಿನಿಮಾದ ಟೈಟಲ್ ರಿವೀಲ್ ಮಾಡಿದ ಚಿತ್ರತಂಡ ಇದೀಗ ಫಸ್ಟ್ ಲುಕ್ ರಿಲೀಸ್ ಮಾಡಿ ಕುತೂಹಲವನ್ನು ಹೆಚ್ಚಾಗಿಸಿದೆ.ಶಿವಣ್ಣ ಬಿಳಿ ಗಡ್ಡ-ಮೀಸೆಯ ಯೋಧನಾಗಿ ಕಾಣಿಸಿಕೊಂಡಿದ್ದಾರೆ. ಈ ಪೋಸ್ಟರ್ ಗಮನ ಸೆಳೆದಿದೆ.

