ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ನ್ಯಾಯಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ರೀಲ್ಸ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿ ಆಚೆ ಬಂದಿದ್ದ ರಜತ್‌ ಕಿಶನ್ಗೆ ಏಪ್ರಿಲ್ 29ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ

ಇನ್ನು ಇದೇ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯಾದ ವಿನಯ್ ಗೌಡಗೆ 500 ರೂಪಾಯಿ ದಂಡ ವಿಧಿಸಿ ವಾರಂಟ್ ರೀಕಾಲ್ ಮಾಡಲಾಗಿದೆ. ಈ ಮಧ್ಯೆ ಜಾಮೀನು ಕೋರಿ ರಜತ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿ ವಿಚಾರಣೆ ಕೋರ್ಟ್ ನಾಳೆ (ಏಪ್ರಿಲ್,17) ನಿಗದಿಪಡಿಸಿದೆ.