Bengaluru 22°C
Ad

ಪ್ಯಾಲೆಸ್ಟೈನ್ ಧ್ವಜ ಹಿಡಿದು ಬೈಕ್​ನಲ್ಲಿ ಓಡಾಡಿದ ನಾಲ್ವರು ಅಪ್ರಾಪ್ತರು ವಶ

ನಗರದ  ಪ್ರಮುಖ ರಸ್ತೆಗಳಲ್ಲಿ ಯುವಕರ ತಂಡವೊಂದು ಪ್ಯಾಲೆಸ್ಟೈನ್ ಧ್ವಜವನ್ನು  ಹಿಡಿದು ಬೈಕ್​ನಲ್ಲಿ ರೌಂಡ್ಸ್ ಹಾಕಿದ್ದಾರೆ.ಇನ್ನು ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾರಿದಾಡುತ್ತಿದೆ. ಸದ್ಯ ಈ ಘಟನೆ ಸಂಬಂಧ ಇದೀಗ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ನಾಲ್ವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತ ಬಾಲಕರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಚಿಕ್ಕಮಗಳೂರು: ನಗರದ  ಪ್ರಮುಖ ರಸ್ತೆಗಳಲ್ಲಿ ಯುವಕರ ತಂಡವೊಂದು ಪ್ಯಾಲೆಸ್ಟೈನ್ ಧ್ವಜವನ್ನು  ಹಿಡಿದು ಬೈಕ್​ನಲ್ಲಿ ರೌಂಡ್ಸ್ ಹಾಕಿದ್ದಾರೆ.ಇನ್ನು ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾರಿದಾಡುತ್ತಿದೆ. ಸದ್ಯ ಈ ಘಟನೆ ಸಂಬಂಧ ಇದೀಗ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ನಾಲ್ವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತ ಬಾಲಕರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇನ್ನು ಈ ಗಟನೆಯನ್ನು ಗಂಭಿರವಾಗಿ ಪರಿಗಣಿಸಿ ಇನ್ಸ್ಪೆಕ್ಟರ್ ಗವಿರಾಜ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಪ್ಯಾಲೆಸ್ಟೈನ್ ಧ್ವಜ ಪ್ರಕರಣವನ್ನ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ 198ಅಡಿ ಪ್ರಕರಣ ದಾಖಲಾಗಿದೆ.

ಕೋಮು ಸೂಕ್ಷ್ಮ ಚಿಕ್ಕಮಗಳೂರು ನಗರದಲ್ಲಿ ಗಲಭೆಗೆ ಸಂಚು ಎಂದು ಹಿಂದೂ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಇಂದು 12 ಗಂಟೆಗೆ ಈದ್ ಮಿಲಾದ್ ಮೆರವಣಿಗೆ ಆರಂಭವಾಗಲಿದೆ. ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಲಿದೆ.

 

 

 

 

 

Ad
Ad
Nk Channel Final 21 09 2023