Bengaluru 25°C
Ad

ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಿಣಿರಾಮ ಸೀರಿಯಲ್ ನಟಿ ನಯನಾ ನಾಗರಾಜ್

ಗಿಣಿರಾಮ ಸೀರಿಯಲ್ ನಟಿ ನಯನಾ ನಾಗರಾಜ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲದ ಸ್ನೇಹಿತ ಸುಹಾಸ್ ಶಿವಣ್ಣ ಅವರೊಂದಿಗೆ ನಯನಾ ನಾಗರಾಜ್ ಅವರು ಹೊಸ ಬದುಕಿಗೆ ಕಾಲಿಟ್ಟಿದ್ದು, ಈ ಬ್ಯೂಟಿಫುಲ್ ಜೋಡಿ ಕಳೆದ 10 ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.

300x250 2

ನೂರಾರು ಸವಿ ನೆನಪುಗಳೊಂದಿಗೆ ಇದೀಗ ನಯನಾ ನಾಗರಾಜ್ ಹಾಗೂ ಸುಹಾಸ್ ಶಿವಣ್ಣ ಹೊಸ ಜೀವನ ಜೀವನ ನಡೆಸಲು ಮುಂದಾಗಿದ್ದಾರೆ. ಸುಹಾಸ್ ಶಿವಣ್ಣ ಕೂಡ ರಂಗಭೂಮಿಯಲ್ಲಿ ಗುರುತಿಸಿಕೊಂಡವರು. ಅಷ್ಟೇ ಅಲ್ಲ, ಚೆನ್ನಾಗಿ ಹಾಡುಗಳನ್ನು ಹಾಡುತ್ತಾರೆ.

ಇಬ್ಬರು ಒಂದೇ ಕ್ಷೇತ್ರದಲ್ಲಿ ಇದ್ದಿದ್ದರಿಂದ ಒಬ್ಬರನೊಬ್ಬರು ಅರ್ಥಮಾಡಿಕೊಂಡು ಪ್ರೇಮಾಂಕುರವಾಗಿತ್ತು. ಇದು ಹಾಗೇ ಒಂದಲ್ಲ, ಎರಡಲ್ಲ ಬರೋಬ್ಬರಿ 10 ವರ್ಷಗಳ ಕಾಲ ಪ್ರೀತಿಯಲ್ಲೇ ಇದ್ದರು. ಕೆಲ ತಿಂಗಳ ಹಿಂದೆಯಷ್ಟೇ ಈ ಕ್ಯೂಟ್ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು.

ಈ ಸಂಬಂಧ ಫೋಟೋಸ್ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಸಂತಸದಿಂದ ಗುರು-ಹಿರಿಯರ ಸಮ್ಮುಖದಲ್ಲಿ ಇಬ್ಬರು ಶಾಸ್ತ್ರೋಕ್ತವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ನಯನಾ ನಾಗರಾಜ್ ಮದುವೆಯಲ್ಲಿ ಸಿಹಿ ಕಹಿ ಚಂದ್ರು ಅವರ ಕುಟುಂಬಸ್ಥರು ಭಾಗಿಯಾಗಿದ್ದರು. ಈ ವಿವಾಹದಲ್ಲಿ ನಯನಾ, ಸುಹಾಸ್ ಶಿವಣ್ಣ ಅವರ ಕುಟುಂಬಸ್ಥರು, ಸ್ನೇಹಿತರು ಭಾಗಿಯಾಗಿ ನವಜೋಡಿಗೆ ಶುಭ ಹಾರೈಸಿದ್ದಾರೆ.

Ad
Ad
Nk Channel Final 21 09 2023
Ad