Bengaluru 21°C
Ad

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್‌ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್‌ಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್‌ಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ನಾಳೆ ನಡೆಯಲಿರೋ ಬೆಂಗಳೂರು ವಿವಿಯ 59ನೇ ಘಟಿಕೋತ್ಸವದಲ್ಲಿ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗುತ್ತದೆ ಅಂತ ಬೆಂಗಳೂರು ವಿವಿ ಕುಲಪತಿ ಡಾ.ಜಯಕರ್ ತಿಳಿಸಿದ್ದಾರೆ.

ಘಟಿಕೋತ್ಸವದ ಹಿನ್ನಲೆಯಲ್ಲಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಲೆ, ಸಂಗೀತ ಕ್ಷೇತ್ರದ ಸಾಧನೆಗೆ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಕ್ರೀಡೆ, ಸಮಾಜ ಸೇವೆ ಕ್ಷೇತ್ರದಲ್ಲಿನ ಸಾಧನೆಗೆ ಕೆ.ಎಸ್.ರಾಜಣ್ಣ ರಾಜ್ಯ ಮಾಜಿ ಆಯುಕ್ತರು,ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮ, ಕರ್ನಾಟಕ ಸರ್ಕಾರ ಇವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ ಎಂದು ತಿಳಿಸಿದರು.

 

Ad
Ad
Nk Channel Final 21 09 2023