News Karnataka Kannada
Sunday, May 12 2024
ಮನರಂಜನೆ

ಮಾಧುರಿ ದೀಕ್ಷಿತ್​ಗೆ ವಿಶೇಷ ಜೀವಮಾನ ಸಾಧನೆ ಪ್ರಶಸ್ತಿಯ ಗರಿ

Maduri Dixit Award
Photo Credit : News Kannada

ಗೋವಾ: ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ 2023ರಲ್ಲಿ ನಟಿ ಮಾಧುರಿ ದೀಕ್ಷಿತ್ ವಿಶೇಷ ಗೌರವಕ್ಕೆ ಆಯ್ಕೆ ಆಗಿದ್ದಾರೆ. ಭಾರತೀಯ ಸಿನಿಮಾಕ್ಕೆ ನೀಡಿರುವ ಸೇವೆಯನ್ನು ಪರಿಗಣಿಸಿ ಮಾಧುರಿ ದೀಕ್ಷಿತ್ ಅವರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಟಿ ಮಾಧುರಿ ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ನಾಲ್ಕು ದಶಕಗಳ ಕಾಲದ ಸಿನಿಮಾ ವೃತ್ತಿಜೀವನದೊಂದಿಗೆ, ಮಾಧುರಿ ದೀಕ್ಷಿತ್ ಭಾರತೀಯ ಚಲನಚಿತ್ರೋದ್ಯಮದಲ್ಲಿ ಮೂಡಿಸಿರುವ ಛಾಪನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.

ಗೋವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಈ ಪ್ರಶಸ್ತಿಯನ್ನು ನೀಡಿದ್ದು, ಆ ಬಗ್ಗೆ ಅವರು ಸೋಷಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಭಾರತದ 54 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಚಿತ್ರರಂಗದಲ್ಲಿ ಶ್ರೇಷ್ಠತೆಯನ್ನು ನೀಡಿದ ಪ್ರತಿಭಾವಂತ, ವರ್ಚಸ್ವಿ ನಟಿ ಮಾಧುರಿ ಅವರಿಗೆ ‘ಭಾರತೀಯ ಸಿನಿಮಾಗೆ ಕೊಡುಗೆಗಾಗಿ ವಿಶೇಷ ಮನ್ನಣೆ’ ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತೋಷವಿದೆ ಎಂದು ಸಚಿವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು