News Karnataka Kannada
Friday, May 17 2024
ಮನರಂಜನೆ

ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ

Notic
Photo Credit : NewsKarnataka

ಬೆಂಗಳೂರು: ಸೂಪರ್‌ಸ್ಟಾರ್ ರಜನಿಕಾಂತ್ 171ನೇ ಸಿನಿಮಾ ‘ಕೂಲಿ’ ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ
ಇಳಯರಾಜ ನೋಟಿಸ್ ಕಳುಹಿಸಿದ್ದಾರೆ. ಇಳಯರಾಜ ಕಂಪೋಸ್ ಮಾಡಿದ್ದ ಹಾಡಿನ ತುಣುಕನ್ನು ಬಳಸಿಕೊಂಡಿದ್ದಾರೆಂದು ಚಿತ್ರತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಹೀಗಾಗಿ ಚಿತ್ರತಂಡ ಕಾನೂನು ಸಮಸ್ಯೆ ಎದುರಿಸುತ್ತಿದೆ.

ವರದಿಯ ಪ್ರಕಾರ, ʻಕೂಲಿʼ ಸಿನಿಮಾ ತಂಡ 1983ರ ʻತಂಗ ಮಗನ್ʼ ಚಿತ್ರದ ʻವಾ ವಾ ಪಕ್ಕಂ ವಾʼ ಹಾಡನ್ನು ಅನುಮತಿ ಪಡೆಯದೆ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಇಳಯರಾಜ. ಈ ಸಿನಿಮಾ ಟೈಟಲ್ ಟೀಸರ್‌ ಇತ್ತೀಚೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಇಂತಹ ಸಂದರ್ಭದಲ್ಲಿ ಇಳಯರಾಜ ಟ್ಯೂನ್ ಹಾಕಿದ ಹಾಡನ್ನು ನೆಟ್ಟಿಗರೇ ಗುರುತಿಸಿದ್ದರು.

ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ʻವಾ ವಾ ಪಕಂ ವಾʼ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಿದ್ದರು. ಇದಕ್ಕೆ ಇಳಯರಾಜ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ನಿರ್ಮಾಣ ಸಂಸ್ಥೆಗೆ ನೋಟಿಸ್ ನೀಡಲಾಗಿದೆ.

ಅಲ್ಲದೇ ‘ಕೂಲಿ’ ಟೀಸರ್ ನಿಂದ ಮ್ಯೂಸಿಕ್‌ ತೆಗೆಯದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದೀಗ ಸನ್ ಪಿಕ್ಚರ್ಸ್ ಸಂಸ್ಥೆಗೆ ಹೊಸ ತಲೆನೋವಾಗಿ ಪರಿಣಮಿಸಿದೆ. ಈ ಘಟನೆ ತಮಿಳು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು