News Karnataka Kannada
Wednesday, May 01 2024
ಮನರಂಜನೆ

ಆಘಾತ ತಮಿಳು ಚಿತ್ರರಂಗಕ್ಕೆ: ಸಂಗೀತ ಮಾಂತ್ರಿಕ ಇಳಯರಾಜ ಪುತ್ರಿ ನಿಧನ

ಭಾರತ ಸಿನಿಮಾ ರಂಗದಲ್ಲಿ ಸಂಗೀತ ಮಾಂತ್ರಿಕ ಎಂದೇ ಖ್ಯಾತವಾಗಿರುವ ಜನಪ್ರಿಯ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ, ಗಾಯಕಿ ಭವತಾರಿಣಿ ಹಠಾತ್ ನಿಧನ ಹೊಂದಿದ್ದಾರೆ.
Photo Credit : News Kannada

ಚೆನ್ನೈ: ಭಾರತ ಸಿನಿಮಾ ರಂಗದಲ್ಲಿ ಸಂಗೀತ ಮಾಂತ್ರಿಕ ಎಂದೇ ಖ್ಯಾತವಾಗಿರುವ ಜನಪ್ರಿಯ ಸಂಗೀತ ನಿರ್ದೇಶಕ ಇಳಯರಾಜ ಅವರ ಪುತ್ರಿ, ಗಾಯಕಿ ಭವತಾರಿಣಿ ಹಠಾತ್ ನಿಧನ ಹೊಂದಿದ್ದಾರೆ.

ಅವರಿಗೆ 40 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ತಿಂಗಳಿನಿಂದ ಭವತಾರಿಣಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಭಾವತಾರಿಣಿ ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ತಮಿಳು ಚಿತ್ರರಂಗ ಹಾಗೂ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಭವತಾರಿಣಿ, ಕಳೆದ ಕೆಲವು ದಿನಗಳಿಂದ ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ಅವರು ಜನವರಿ 25ರಂದು ರಾತ್ರಿ ನಿಧನ ಹೊಂದಿದ್ದಾರೆ. ಅವರ ಮೃತದೇಹವನ್ನು ಚೆನ್ನೈನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದೆಂದು ಹೇಳಲಾಗುತ್ತಿದೆ.

ಭಾವತಾರಿಣಿ ಸ್ವತಃ ಅದ್ಭುತ ಗಾಯಕಿ ಆಗಿದ್ದರು. ಹಲವು ತಮಿಳು ಹಾಡುಗಳನ್ನು ಹಾಡಿರುವ ಭಾವತಾರಿಣಿ ‘ಭಾರತಿ’ ಸಿನಿಮಾದ ಹಾಡಿಗಾಗಿ ರಾಷ್ಟ್ರಪ್ರಶಸ್ತಿಯನ್ನು ಸಹ ಗಳಿಸಿದ್ದರು. ಈ ಸಿನಿಮಾ ಸುಬ್ರಹ್ಮಣ್ಯ ಭಾರತಿ ಅವರ ಜೀವನದ ಮೇಲೆ ಆಧಾರಿತವಾಗಿತ್ತು. ಇದು ಮಾತ್ರವೇ ಅಲ್ಲದೆ ತಮ್ಮ ಸುಮಧುರ ಗಾಯನಕ್ಕಾಗಿ ರಾಜ್ಯ ಪ್ರಶಸ್ತಿಗಳನ್ನು ಸಹ ಭಾವತಾರಿಣಿ ಗಳಿಸಿದ್ದರು.

ಭಾವತಾರಿಣಿ ನಿಧನಕ್ಕೆ ತಮಿಳು ಚಿತ್ರರಂಗ ಹಾಗೂ ರಾಜಕೀಯ ರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ತಮಿಳುನಾಡು ಸಿಎಂ ಸ್ಟಾಲಿನ್, ‘ಭಾವತಾರಿಣಿ ನಿಧನದಿಂದಾಗಿ ಉಂಟಾಗಿರುವ ನಿರ್ವಾತವನ್ನು ಯಾರೂ ತುಂಬಲಾರರು ಅದು ಹಾಗೆಯೇ ಉಳಿಯಲಿದೆ’ ಎಂದಿದ್ದಾರೆ.

 

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು