ಪ್ರಭಾಸ್ ಅಭಿನಯದ ಪ್ಯಾನ್ ಇಂಡಿಯಾ ಮೂವಿ ಕಲ್ಕಿ 2898 AD ಬಹುನಿರೀಕ್ಷೆ ಹುಟ್ಟುಹಾಕಿರುವ ಸಿನಿಮಾ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಸಿನಿಮಾ ಮೇಕಿಂಗ್‌ನಿಂದ ಸಖತ್ ಹೈಪ್ ಕ್ರಿಯೇಟ್ ಮಾಡಿದೆ.
ಇದೀಗ ಇದೇ ಸಿನಿಮಾಕ್ಕೆ ರಿಷಬ್ ಶೆಟ್ಟಿ ಸಾಥ್ ನೀಡಿದ್ದಾರೆ. ಅಂದರೆ ಕಲ್ಕಿ ಸಿನಿಮಾದಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಬುಜ್ಜಿ ಕಾರನ್ನು ಕುಂದಾಪುರದಲ್ಲಿ ರೈಡ್ ಮಾಡುವ ಮೂಲಕ ಪ್ರಭಾಸ್ಗೆ ಸಾಥ್ ನೀಡಿದಂತೆ ಆಗಿದೆ.
ಭೈರವನ ಆಪ್ತ ಬುಜ್ಜಿ ವಾಹನವನ್ನು ಈಗಾಗಲೇ ಸಾಕಷ್ಟು ಸೆಲೆಬ್ರಿಟಿಗಳು ಓಡಿಸಿದ್ದಾರೆ. ಇದನ್ನು ತಯಾರಿಸಿದ ಮಹೀಂದ್ರಾ ಕಂಪನಿಯ ಆನಂದ್ ಮಹೀಂದ್ರ ಸಹ ಇತ್ತೀಚೆಗಷ್ಟೇ ಈ ವಾಹನ ಏರಿ ಖುಷಿ ಪಟ್ಟಿದ್ದರು. ಇದೀಗ ಇದೇ ವಾಹನ ಕುಂದಾಪುರಕ್ಕೆ ಬಂದಿದೆ. ಸ್ಟೈಲಿಶ್ ಲುಕ್‌ನಲ್ಲಿ ಬುಜ್ಜಿಯನ್ನು ರೈಡ್ ಮಾಡಿದ್ದಾರೆ. ಈ ರೈಡ್‌ನ ಕಿರು ವಿಡಿಯೋವನ್ನು ವೈಜಯಂತಿ ಮೂವೀಸ್ ಟ್ವಿಟರ್ ಪುಟದಲ್ಲಿ ಶೇರ್ ಮಾಡಿದ್ದು, ಕಲ್ಕಿ X ಕಾಂತಾರ ಎಂಬ ಕ್ಯಾಪ್ಷನ್ ನೀಡಿದೆ.

